ಸಚಿವರ ಹೆಸರು ಬರೆದಿಟ್ಟು ಅಧಿಕಾರಿ ಆತ್ಮಹತ್ಯೆ: ಮುಖ್ಯಮಂತ್ರಿ ರಾಜೀನಾಮೆಗೆ ಅಶೋಕ ಆಗ್ರಹ

Sampriya
ಸೋಮವಾರ, 27 ಮೇ 2024 (18:53 IST)
‌ ಕೋಲಾರ:  ಶಿವಮೊಗ್ಗದಲ್ಲಿ ಅಧಿಕಾರಿಯೊಬ್ಬರು  ಹಣದ ದುರುಪಯೋಗ ಸಂಬಂಧ ಸಚಿವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ, ಮುಖ್ಯಮಂತ್ರಿಗೆ ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮುಖಂಡ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಒತ್ತಾಯಿಸಿದರು.

ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿದೆ. ಈಗ ದಾಖಲೆ ಸಮೇತ ಜಗಜ್ಜಾಹೀರಾಗಿದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕೇ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.

ಶಿವಮೊಗ್ಗದಲ್ಲಿ ಅಕೌಂಟೆಂಟ್‌ ಚಂದ್ರಶೇಖರ್ ‌ಎಂಬುವರು ₹ 187 ಕೋಟಿ ಅವ್ಯವಹಾರ ಸಂಬಂಧ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ ನೋಟ್‌ನಲ್ಲಿ ಮಂತ್ರಿ ಹಾಗೂ ಅಧಿಕಾರಿಗಳ ಹೆಸರು ನಮೂದಿಸಿದ್ದಾರೆ. ಲೂಟಿ ಸರ್ಕಾರ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಇನ್ನೇನು ಬೇಕು ಎಂದು ಅವರು ಹೇಳಿದರು.

ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಸಂಪೂರ್ಣ ಕುಸಿದು ಹೋಗಿದೆ. ನಿತ್ಯ ಕೊಲೆ, ಸುಲಿಗೆ ನಡೆಯುತ್ತಿವೆ. ಕಾಲೇಜಿಗೆ, ಕೆಲಸಕ್ಕೆ ಹೋದ ಹೆಣ್ಣು ಮಕ್ಕಳು ಮನೆಗೆ ವಾಪಸ್‌ ಬರುತ್ತಿಲ್ಲ. ಮಹಿಳೆಯರ ಬದುಕುವ ಗ್ಯಾರಂಟಿ ಕಿತ್ತುಕೊಂಡಿದೆ. ಯಾವುದೇ ಅಭಿವೃದ್ಧಿ ಕೆಲಸವೂ ನಡೆಯುತ್ತಿಲ್ಲ ಎಂದು ಟೀಕಾ ಪ್ರಹಾರ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ನಾಯಕತ್ವವೇ ಬೇಡ: ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷದಿಂದಲೇ ಬೇಡಿಕೆ

ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವು ಪ್ರಕರಣ, ಸಿಬ್ಬಂದಿಗೆ ಢವಢವ

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ರಿಲೀಫ್‌

ದೆಹಲಿ ಕೆಂಪು ಕೋಟೆ ಸ್ಫೋಟ ಪ್ರಕರಣ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಧಾನಿ ಭೇಟಿ ಮೊದಲು ಸಿಎಂ ನೆರೆ ಪರಿಹಾರ ಕೊಡಬೇಕಿತ್ತು: ಸಿಟಿ ರವಿ

ಮುಂದಿನ ಸುದ್ದಿ
Show comments