ಅಧಿಕಾರಿಗಳು ನಿಮ್ಮ ಮನೆಯ ಜೀತದಾಳುಗಳಲ್ಲ: ಸಿದ್ದರಾಮಯ್ಯಗೆ ಆರ್‌ ಅಶೋಕ್ ಪ್ರಶ್ನೆ

Sampriya
ಸೋಮವಾರ, 28 ಏಪ್ರಿಲ್ 2025 (20:44 IST)
ಬೆಂಗಳೂರು: ಎಎಸ್‌ಪಿ ನಾರಾಯಣ ಭರಮನಿ ಮೇಳೆ ಬಹಿರಂಗವಾಗಿ ವೇದಿಕೆ ಮೇಲೆ ಕೈ ಎತ್ತುವ ಮೂಲಕ ಸಿಎಂ ಸಿದ್ದರಾಮಯ್ಯ ದರ್ಪ ಪ್ರದರ್ಶನ ಮಾಡಿದ್ದಾರೆ ಎಂದು ಬಿಜೆಪಿ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಎರಡು-ಮೂರು ತಿಂಗಳ ಹಿಂದೆ ವಿಜಯನಗರ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತುಂಬಿದ ವೇದಿಕೆಯ ಮೇಲೆ ದಲಿತ ಸಮುದಾಯಕ್ಕೆ ಸೇರಿದ ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ಏಕವಚನದಲ್ಲಿ ನಿಂದಿಸಿ 'ಇಲ್ಯಾಕೆ ಕೂತಿದ್ದೀಯಾ' ಎಂದು ದರ್ಪ
ಪ್ರದರ್ಶನ ಮಾಡಿದ್ದ ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗಾವಿಯಲ್ಲಿ ಎಎಸ್​ಪಿ ನಾರಾಯಣ ಭರಮನಿ ಅವರ ಮೇಲೆ ಬಹಿರಂಗ ವೇದಿಕೆಯ ಮೇಲೆ ಕೈ ಎತ್ತುವ ಮೂಲಕ ಮತ್ತೊಮ್ಮೆ ತಮ್ಮ ಅಧಿಕಾರದ ಮದವನ್ನ ಪ್ರದರ್ಶನ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಅಧಿಕಾರಿಗಳು ನಿಮ್ಮ ಮನೆಯ ಜೀತದಾಳುಗಳಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾರ್ಯಂಗಕ್ಕೆ ತನ್ನದೇ ಆದ ಸ್ಥಾನಮಾನ ಇದೆ. ನಿಮ್ಮ ದುರ್ವರ್ತನೆ, ದುರ್ನಡತೆಯಿಂದ ರಾಜ್ಯದ ಮರ್ಯಾದೆ ಹರಾಜಾಗುತ್ತಿದೆ. ಗೌರವ ಕೊಟ್ಟು ಗೌರವ ಪಡೆಯುವುದನ್ನ ಕಲಿಯಿರಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments