Publish Date: Wed, 20 Sep 2023 (16:00 IST)
Updated Date: Wed, 20 Sep 2023 (17:53 IST)
ದೆಹಲಿಯಲ್ಲಿ ಸಂಸದರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ವಿಚಾರಕ್ಕೆ ಮಾಜಿ ಸಿಎಂ H.D. ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಇವತ್ತು ದೆಹಲಿಯಲ್ಲಿ ಸಿಎಂ, ಡಿಸಿಎಂ ಸಭೆ ಮಾಡಿದ್ದಾರೆ. ಇನ್ನೂ ಸುಪ್ರೀಂಕೋರ್ಟ್ಗೆ ಅರ್ಜಿ ಹಾಕ್ತೀವಿ ಅಂತ ಕಾಲಹರಣ ಮಾಡ್ತಿದ್ದಾರೆ. ರೈತರ ಉಳಿವಿಗೆ ಇಷ್ಟೊತ್ತಿಗಾಗಲೇ ಚಿಂತನೆ ನಡೆಸಬೇಕಾಗಿತ್ತು. ಆದರೆ ಸರ್ಕಾರ ಇನ್ನೂ ಆ ಕೆಲಸ ಮಾಡಿಲ್ಲ. ಸುಪ್ರೀಂ ಕೋರ್ಟ್ಗೆ ಅರ್ಜಿ ಹಾಕಲು ಮೀನಾಮೇಷ ಎಣಿಸುತ್ತಿದ್ದಾರೆ. ತಮಿಳುನಾಡಿನವರು ಒಂದು ತಿಂಗಳ ಹಿಂದೆಯೇ ಅರ್ಜಿ ಹಾಕಿದ್ದಾರೆ. ಆದರೆ ನೀವು ಅರ್ಜಿ ಹಾಕಿದ ತಕ್ಷಣ ನೀರು ಬಿಟ್ರಿ. ಅದರ ಬದಲು ನೀವು ಅರ್ಜಿ ಹಾಕಬಹುದಿತ್ತು. ನಾನು ಈ ಬಗ್ಗೆ ಒಂದು ತಿಂಗಳ ಮುಂಚೆಯೇ ಹೇಳಿದ್ದೆ. ಕಾವೇರಿ ನಿರ್ವಹಣಾ ಪ್ರಾಧಿಕಾರದವ್ರು ದೇವಲೋಕದಿಂದ ಇಳಿದು ಬಂದಿಲ್ಲ. ನಮ್ಮ ರಾಜ್ಯದ ವಾಸ್ತವ ಸ್ಥಿತಿ ಬಗ್ಗೆ ಅವರಿಗೆ ಮಾಹಿತಿ ಇಲ್ಲ. ನಮ್ಮ ಅಧಿಕಾರಿಗಳು ಕೂಡ ಕಾಟಾಚಾರಕ್ಕೆ ಹೋಗಿ ಸಭೆಯಲ್ಲಿ ಭಾಗಿಯಾಗ್ತಾರೆ ಎಂದು ಕಿಡಿಕಾರಿದ್ರು.