Select Your Language

Notifications

webdunia
webdunia
webdunia
webdunia

ಕೊರೊನಾಗೆ ವೃದ್ಧ ಸಾವು : ಇಷ್ಟು ವಯಸ್ಸಾದವರಿಗೆ ವೈದ್ಯಕೀಯ ಪರೀಕ್ಷೆ ಕಡ್ಡಾಯ

ಕೊರೊನಾಗೆ ವೃದ್ಧ ಸಾವು : ಇಷ್ಟು ವಯಸ್ಸಾದವರಿಗೆ ವೈದ್ಯಕೀಯ ಪರೀಕ್ಷೆ ಕಡ್ಡಾಯ
ವಿಜಯಪುರ , ಮಂಗಳವಾರ, 19 ಮೇ 2020 (16:36 IST)
ಕಂಟೈನ್ಮೆಂಟ್ ವಲಯದಲ್ಲಿ ವೃದ್ಧ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದು, ಆತನಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ ಎಂದು ಡಿಸಿ ತಿಳಿಸಿದ್ದಾರೆ.

ಕೋವಿಡ್-19 ಮುನ್ನೆಚ್ಚರಿಕೆಯಾಗಿ ವಿಜಯಪುರ ನಗರದ ಕಂಟೈನ್ಮೆಂಟ್ ವಲಯದಲ್ಲಿನ 60 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರ ಗಂಟಲು ದ್ರವ ಮಾದರಿಯನ್ನು ವೈದ್ಯಕೀಯ ಪರೀಕ್ಷೆಗೆ ರವಾನಿಸಲಾಗುತ್ತಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಹೇಳಿದ್ದಾರೆ.

ಸಾರಿ ಮತ್ತು ಐಎಲ್‍ಐಗಳಂತಹ ಪ್ರಕರಣಗಳಲ್ಲಿಯೂ ವ್ಯಕ್ತಿಗಳ ಗಂಟಲು ದ್ರವ ಮಾದರಿ ಪರೀಕ್ಷೆಗೆ ರವಾನಿಸಲಾಗುತ್ತಿದ್ದು, ಪಾಸಿಟಿವ್ ಬಂದಲ್ಲಿ ಆಸ್ಪತ್ರೆ ಕ್ವಾರಂಟೈನ್ ಮಾಡಲಾಗುತ್ತಿದೆ.

ಮಹಾರಾಷ್ಟ್ರ ರಾಜ್ಯದಿಂದ ಸುಮಾರು 15 ಸಾವಿರ ಜನರು ಜಿಲ್ಲೆಗೆ ಆಗಮಿಸಿದ್ದು, ಪ್ರತಿದಿನ ಜಿಲ್ಲೆಯಲ್ಲಿ ಕ್ವಾರಂಟೈನ್ ಕೇಂದ್ರಗಳಲ್ಲಿರುವವರ 1 ಸಾವಿರದಿಂದ 1500 ವರೆಗೆ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗುತ್ತಿದ್ದು, ಸರ್ಕಾರದ ನಿರ್ದೇಶನದಂತೆ ಸೂಕ್ತ ಕ್ರಮ ಜರುಗಿಸಲಾಗುತ್ತಿದೆ ಎಂದಿದ್ದಾರೆ.

ಕಂಟೈನ್ಮೇಂಟ್ ವಲಯದಿಂದ 65 ವರ್ಷ ವಯೋಮಾನದ ವೃದ್ಧನಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದು ರೋಗಿ ಸಂಖ್ಯೆ 1291 ಜಿಲ್ಲಾಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

125 ಕೊರೊನಾ ಸೋಂಕಿತರು : ಕಲಬುರಗಿಗೆ ತಬ್ಲಿಘಿ ನಂತರ ಮುಂಬೈ ಕಾಟ