ಕೊರೊನಾಗೆ ವೃದ್ಧ ಸಾವು : ಇಷ್ಟು ವಯಸ್ಸಾದವರಿಗೆ ವೈದ್ಯಕೀಯ ಪರೀಕ್ಷೆ ಕಡ್ಡಾಯ

Webdunia
ಮಂಗಳವಾರ, 19 ಮೇ 2020 (16:36 IST)
ಕಂಟೈನ್ಮೆಂಟ್ ವಲಯದಲ್ಲಿ ವೃದ್ಧ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದು, ಆತನಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ ಎಂದು ಡಿಸಿ ತಿಳಿಸಿದ್ದಾರೆ.

ಕೋವಿಡ್-19 ಮುನ್ನೆಚ್ಚರಿಕೆಯಾಗಿ ವಿಜಯಪುರ ನಗರದ ಕಂಟೈನ್ಮೆಂಟ್ ವಲಯದಲ್ಲಿನ 60 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರ ಗಂಟಲು ದ್ರವ ಮಾದರಿಯನ್ನು ವೈದ್ಯಕೀಯ ಪರೀಕ್ಷೆಗೆ ರವಾನಿಸಲಾಗುತ್ತಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಹೇಳಿದ್ದಾರೆ.

ಸಾರಿ ಮತ್ತು ಐಎಲ್‍ಐಗಳಂತಹ ಪ್ರಕರಣಗಳಲ್ಲಿಯೂ ವ್ಯಕ್ತಿಗಳ ಗಂಟಲು ದ್ರವ ಮಾದರಿ ಪರೀಕ್ಷೆಗೆ ರವಾನಿಸಲಾಗುತ್ತಿದ್ದು, ಪಾಸಿಟಿವ್ ಬಂದಲ್ಲಿ ಆಸ್ಪತ್ರೆ ಕ್ವಾರಂಟೈನ್ ಮಾಡಲಾಗುತ್ತಿದೆ.

ಮಹಾರಾಷ್ಟ್ರ ರಾಜ್ಯದಿಂದ ಸುಮಾರು 15 ಸಾವಿರ ಜನರು ಜಿಲ್ಲೆಗೆ ಆಗಮಿಸಿದ್ದು, ಪ್ರತಿದಿನ ಜಿಲ್ಲೆಯಲ್ಲಿ ಕ್ವಾರಂಟೈನ್ ಕೇಂದ್ರಗಳಲ್ಲಿರುವವರ 1 ಸಾವಿರದಿಂದ 1500 ವರೆಗೆ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗುತ್ತಿದ್ದು, ಸರ್ಕಾರದ ನಿರ್ದೇಶನದಂತೆ ಸೂಕ್ತ ಕ್ರಮ ಜರುಗಿಸಲಾಗುತ್ತಿದೆ ಎಂದಿದ್ದಾರೆ.

ಕಂಟೈನ್ಮೇಂಟ್ ವಲಯದಿಂದ 65 ವರ್ಷ ವಯೋಮಾನದ ವೃದ್ಧನಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದು ರೋಗಿ ಸಂಖ್ಯೆ 1291 ಜಿಲ್ಲಾಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಭೇಟಿ ಬಳಿಕ ಮತ್ತೇ ಶಾಂತಿ ಮಂತ್ರ ಪಠಿಸಿದ ಡಿಕೆ ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಪ್ರಕರಣ, ರಾಹುಲ್ ಗಾಂಧಿ, ಸೋನಿಯಾ ವಿರುದ್ಧ ಹೊಸ ಪ್ರಕರಣ

ದಿತ್ವಾ ಚಂಡಮಾರುತ, ಶ್ರೀಲಂಕಾದಲ್ಲಿ 132ಮಂದಿ ಸಾವು, 176ಮಂದಿ ನಾಪತ್ತೆ

ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಕಾಂಪ್ರಮೈಸ್ ಆಗಿರುವುದರ ಹಿಂದಿದ ಸೀಕ್ರೆಟ್ ಇದುವೇ

ದಿತ್ವಾ ಚಂಡಮಾರುತದ ಎಫೆಕ್ಟ್‌ಗೆ ಗಡಗಡ ನಡುಗಿದ ಸಿಲಿಕಾನ್ ಮಂದಿ

ಮುಂದಿನ ಸುದ್ದಿ
Show comments