Publish Date: Mon, 20 Dec 2021 (15:20 IST)
Updated Date: Mon, 20 Dec 2021 (18:23 IST)
ಕಾರವಾರ : ಕರಾವಳಿಯ ಉಡುಪಿ, ಮಂಗಳೂರು ಭಾಗದಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗುತ್ತಿದ್ದಂತೆ ಗಡಿ ಜಿಲ್ಲೆ ಉತ್ತರ ಕನ್ನಡದಲ್ಲೂ ಕಠಿಣ ನಿಯಮಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಜಾರಿ ಮಾಡಿದ್ದು,
ವಿದೇಶದಿಂದ ಜಿಲ್ಲೆಗೆ ಆಗಮಿಸಿರುವ 17 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಜಿಲ್ಲೆಗೆ ಆಗಮಿಸಿರುವ 218 ಜನರ ಜಿನೋಮ್ ಸೀಕ್ವೆನ್ಸ್ ತಪಾಸಣೆಗೆ ಕಳುಹಿಸಿರುವ ಜಿಲ್ಲಾ ಆರೋಗ್ಯ ಇಲಾಖೆ ಇದೀಗ ಜಿಲ್ಲೆಗೆ ಬರುವ ವಿದೇಶಿ ಪ್ರವಾಸಿಗರಿಗೂ ಕ್ವಾರಂಟೈನ್ಗೆ ಸೂಚಿಸಿದೆ.
ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಓಮಿಕ್ರಾನ್ ಹೆಚ್ಚಾಗಿ ಕಂಡುಬಂದಿರುವ ದೇಶಗಳಿಂದ ಭಾರತಕ್ಕೆ ಆಗಮಿಸಿ ಅಲ್ಲಿಂದ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸುವ ಜನರ ಮೇಲೆ ನಿಗಾ ವಹಿಸಲಾಗಿದ್ದು, ವಿದೇಶದಿಂದ ಬರುವ ಎಲ್ಲರನ್ನೂ ಕೂಡ ಕೊರೊನಾ ಟೆಸ್ಟ್ ಮಾಡಿಸಿ ನೆಗೆಟಿವ್ ಬಂದರೆ ಅವರನ್ನು ಹೋಂ ಐಸೋಲೇಶನ್ ಮಾಡಲಾಗುತ್ತಿದೆ.