Publish Date: Mon, 29 Nov 2021 (18:18 IST)
Updated Date: Mon, 29 Nov 2021 (18:55 IST)
ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಹೊಸ ರೂಪಾಂತರಿ ಒಮಿಕ್ರಾನ್ ತಳಿ ಆತಂಕ ಸೃಷ್ಟಿಸಿದೆ. ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಹೊಂದಿಕೊಂಡಿರುವ, ಒಟ್ಟು 23 ಚೆಕ್ಪೋಸ್ಟ್ಗಳಲ್ಲೂ ತೀವ್ರ ನಿಗಾ ವಹಿಸುವಂತೆ ಜಿಲ್ಲಾಡಳಿತಕ್ಕೆ ಸರ್ಕಾರ ಸೂಚನೆ ನೀಡಿದೆ. ಹೀಗಾಗಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಪ್ರತಿಯೊಂದು ವಾಹನಗಳಿಗೆ ತೀವ್ರ ತಪಾಸಣೆ ನಡೆಸುತ್ತಿದ್ದಾರೆ.
ಅಷ್ಟೇಅಲ್ಲ, ರಾಜ್ಯಕ್ಕೆ ಬರುವವರು ಆರ್ಟಿಪಿಸಿಆರ್ ವರದಿ ತರಬೇಕು ಮತ್ತು ಎರಡು ಡೋಸ್ ಲಸಿಕೆ ಪಡೆದಿದ್ದರೆ ಮಾತ್ರ ಪ್ರವೇಶಿಸಲು ಅನುಮತಿ ನೀಡಲಾಗಿದೆ. ಆರ್ಟಿಪಿಸಿಆರ್ ವರದಿ ತರದೆ ಬಂದವರನ್ನು ಪೊಲೀಸರು ವಾಪಸ್ ಕಳುಹಿಸುತ್ತಿದ್ದಾರೆ.