Webdunia - Bharat's app for daily news and videos

Install App

ಒಮಿಕ್ರಾನ್: ದೀರ್ಘಾವಧಿ ಕ್ರಮಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ- ಸಿಎಂ

Webdunia
ಸೋಮವಾರ, 3 ಜನವರಿ 2022 (19:54 IST)
ಬೆಂಗಳೂರು: ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಒಟ್ಟಾರೆ ರಾಜ್ಯದ ಸ್ಥಿತಿಗತಿಗಳ ಬಗ್ಗೆ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚಿಸಿ ದೀರ್ಘಾವಧಿ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
ಕೋವಿಡ್ ಮತ್ತು ಒಮಿಕ್ರಾನ್ ವೈರಸ್ ವೇಗವಾಗಿ ದೇಶ ಹಾಗೂ ರಾಜ್ಯಗಳಲ್ಲಿ ಹರಡುತ್ತಿದೆ. ಈ ಬಗ್ಗೆ ತಜ್ಞರೊಂದಿಗೆ ನಾಳೆ ಸಂಜೆ ಸಭೆ ನಡೆಸಿ ಚರ್ಚಿಸಲಾಗುವುದು. ಹಿಂದೆ ಎರಡು ಅಲೆಗಳನ್ನು ನಿಭಾಯಿಸಿರುವ ಅನುಭವದ ಹಿನ್ನೆಲೆಯಲ್ಲಿ ಆದಷ್ಟೂ ಜನಜೀವನಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಕೊರೋನಾ ನಿಯಂತ್ರಣಕ್ಕೆ ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂಬ ಬಗ್ಗೆ ಸೂಚನೆ ನೀಡುವಂತೆ ತಜ್ಞರಿಗೆ ಸೂಚನೆ ನೀಡಲಾಗಿದೆ ಎಂದರು.
ಲಸಿಕೆ ಅಭಿಯಾನ
ಇಂದು 15- 18 ವಯೋಮಾನದವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿದ್ದೇವೆ. ಯುವ ಜನರನ್ನು ಸುರಕ್ಷಾ ವೃತ್ತದೊಳಗೆ ತರಬೇಕಿದೆ. ಅದಕ್ಕಾಗಿ ವ್ಯಾಪಕವಾದ ಅಭಿಯಾನವನ್ನು ಕೈಗೊಳ್ಳಲಿದ್ದೇವೆ. ಇದು ಯಶಸ್ವಿಯಾಗಲು , ಪೋಷಕರು, ಶಿಕ್ಷಕರು, ಆರೋಗ್ಯ ಕಾರ್ಯಕರ್ತರ ಸಮನ್ವಯ ಅಗತ್ಯವಿದೆ ಎಂದರು.
ಜನತೆ ಸ್ವಯಂ ನಿಯಂತ್ರಣ ಹಾಕಿಕೊಂಡು, ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ವಿನಂತಿ ಮಾಡಿದರು.
ಒಮಿಕ್ರಾನ್ ಭೀತಿಯ ನಡುವೆಯೂ ಕಾಂಗ್ರೆಸ್ ಪಾದಯಾತ್ರೆ ಕೈಗೊಳ್ಳುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯ ಮಂತ್ರಿಗಳು, ಕಾಂಗ್ರೆಸ್ ನಡೆಯನ್ನು ಗಮಸಿಸುತ್ತಿದ್ದು, ಸಾರ್ವತ್ರಿಕ ನಡವಳಿಕೆಯ ಬಗ್ಗೆ ಚರ್ಚೆ ನಡೆಸಿ ತೀರ್ಮಾನಕ್ಕೆ ಬರಲಾಗುವುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments