Webdunia - Bharat's app for daily news and videos

Install App

ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಾಗಿ ಓoಪ್ರಕಾಶ್...?!

Webdunia
ಶುಕ್ರವಾರ, 27 ಫೆಬ್ರವರಿ 2015 (12:25 IST)
ರಾಜ್ಯದ ಪೊಲೀಸ್ ಇಲಾಖೆಯಲ್ಲಿನ ಅತ್ಯುನ್ನತ ಹುದ್ದೆಯಾಗಿರುವ ಪೊಲೀಸ್ ಮಾಹನಿರ್ದೇಶಕರ ಸ್ಥಾನಕ್ಕೆ ಸೇವಾ ಅನುಭವದ ಆಧಾರದ ಮೇಲೆ ಐಪಿಎಸ್ ಅಧಿಕಾರಿ ಓಂ ಪ್ರಕಾಶ್ ಅವರನ್ನು ಅಂತಿಮಗೊಳಿಸಲಾಗಿದ್ದು, ಸರ್ಕಾರವು ಇಂದು ಸಂಜೆ ಅಧಿಕೃತ ಘೋಷಣೆ ಹೊರಡಿಸುವ ಸಾಧ್ಯತೆ ಇದೆ. 
 
ರಾಜ್ಯದ ಪ್ರಸ್ತುತ ಪೊಲೀಸ್ ಮಹಾ ನಿರ್ದೇಶಕರಾಗಿ ರುಕುಮ್ ಪಚಾವೊ ಅವರು ಸೇವೆ ಸಲ್ಲಿಸುತ್ತಿದ್ದು, ಅವರ ಅಧಿಕಾರಾವಧಿಯು ಫೆ.28ಕ್ಕೆ ಮುಕ್ತಾಯವಾಗಲಿದೆ. ಪಚಾವೊ ಅವರಿಂದ ತೆರವಾಗುವ ಪದವಿಗೆ ಬೇರೊಬ್ಬ ಅಧಿಕಾರಿಯನ್ನು ನೇಮಿಸುವ ಹಿನ್ನೆಲೆಯಲ್ಲಿ  ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಿನ್ನೆ ಸಭೆ ನಡೆದಿತ್ತು. ಸಭೆಯಲ್ಲಿ ಸಿಎಂ ಓಂ ಪ್ರಕಾಶ್ ಅವರನ್ನು ಸೇವಾ ಆಧಾರದ ಮೇಲೆ ಅಂತಿಮ ಗೊಳಿಸಲಾಗಿತ್ತು.
 
ಇನ್ನು ಗೃಹ ಸಚಿವ ಕೆ.ಜೆ.ಜಾರ್ಜ್ ಅವರ ನೇತೃತ್ವದಲ್ಲಿ ಇಂದು ಸಂಜೆ ನಾಲ್ಕು ಗಂಟೆಗೆ ಮತ್ತೊಂದು ಸಬೆ ನಡೆಯಲಿದ್ದು, ಬಳಿಕ ಅಧಿಕೃತವಾಗಿ ಪದವಿ ನೇಮಕದ ಬಗ್ಗೆ ಘೋಷಿಸಲಾಗುವುದು ಎಂದು ತಿಳಿದು ಬಂದಿದೆ. ಐಪಿಎಸ್ ಅಧಿಕಾರಿಗಳಾದ ಆರ್.ಕೆ.ದತ್ತಾ ಹಾಗೂ ಓಂ ಪ್ರಕಾಶ್ ಅವರು ಈ ಪದವಿಯ ರೇಸ್‌ನಲ್ಲಿದ್ದರು.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments