Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಆಗಸ್ಟ್ 31ರಂದು ವೇತನ ಸಹಿತ ಕಾರ್ಮಿಕರಿಗೆ ರಜೆ

webdunia
ಶುಕ್ರವಾರ, 24 ಆಗಸ್ಟ್ 2018 (20:43 IST)
ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ-2018ರ ಹಿನ್ನೆಲೆಯಲ್ಲಿ ಆಗಸ್ಟ್ 31ರಂದು ಮತದಾನ ನಡೆಯಲಿದೆ. ಜಿಲ್ಲೆಯ ಮತದಾನ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ನೋಂದಾಯಿತರಾದ ಅರ್ಹ ಮತದಾರರಾಗಿರುವ ಎಲ್ಲ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವುಂತೆ  ಆ. 31ರಂದು ವೇತನ ಸಹಿತ ರಜೆ ನೀಡಲು ಸರಕಾರ ಆದೇಶ ನೀಡಿದೆ.

ಮತದಾನದ ದಿನ ಕಾರ್ಮಿಕರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಜಿಲ್ಲೆಯ ಎಲ್ಲ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಹಾಗೂ 1951ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ) ರಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕದಾ ಮತವನ್ನು ಚಾಯಿಸುವುದಕ್ಕಾಗಿ ಎಲ್ಲ ಸಂಸ್ಥೆಗಳು, ನಿಯೋಜಕರು ಅನುವು ಮಾಡಿಕೊಡಬೇಕು.

ಚುನಾವಣೆ ನಡೆಯುವ ಸ್ಥಳಗಳಲ್ಲಿ ಅರ್ಹ ಕಾರ್ಮಿಕರು ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳ ಮಾಲೀಕರು ವೇತನ ಸಹಿತ ರಜೆ ನೀಡಲು ಸರ್ಕಾರ ಆದೇಶಿಸಿದ್ದು, ಇದಕ್ಕೆ ತಪ್ಪಿದ್ದಲ್ಲಿ ಸಂಬಂಧಪಟ್ಟ ಸಂಸ್ಥೆ, ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಹೊಸ ತಾಲೂಕು: ತಿಂಗಳ ಅಂತ್ಯದೊಳಗೆ ದಾಖಲೆ ವರ್ಗಾವಣೆ ಎಂದ ಸಚಿವ