ರಾಜ್ಯ ಸಚಿವ ಸಂಪುಟ ಪುನರ್ ರಚನೆ ವಿಚಾರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇ 26 ರಂದು ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.
ರಾಜ್ಯ ಸರಕಾರ 3 ವರ್ಷ ಅಧಿಕಾರವಧಿಯನ್ನು ಪೂರೈಸಿದ್ದು, ಶಾಸಕರು, ಸಚಿವ ಸಂಪುಟದಲ್ಲಿ ಸ್ಥಾನಮಾನ ದೊರೆತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮತ್ತು ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿ ಸಹ ನೆನೆಗುದಿಗೆ ಬಿದ್ದ ಹಿನ್ನೆಲೆಯಲ್ಲಿ ಮೇ 26 ರಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೆಹಲಿಗೆ ತೆರಳಲಿದ್ದು, ಸೋನಿಯಾ ಗಾಂಧಿಯವರೊಂದಿಗೆ ಚರ್ಚೆ ನಡೆಸಿದ ಬಳಿಕ ಸಂಪುಟ ಪುನಾರಚನೆ ಮಾಡಲಿದ್ದಾರೆ ಎನ್ನಲಾಗಿದೆ.
ಇದೆ ಸಂದರ್ಭದಲ್ಲಿ ರಾಜ್ಯಸಭೆಗೆ ಮೂರನೆಯ ವ್ಯಕ್ತಿ ಆಯ್ಕೆಯ ಕುರಿತು ಹೈಕಮಾಂಡ್ ಜೊತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.