Publish Date: Thu, 12 Jul 2018 (17:13 IST)
Updated Date: Thu, 12 Jul 2018 (17:19 IST)
ನಿರುಪಯುಕ್ತ ಮೆಡಿಕಲ್ ವೇಸ್ಟೇಜ್ ಗಳನ್ನು ಎಲ್ಲೆಂದರಲ್ಲಿ ಬಿಸಾಕುತ್ತಿದ್ದ ಖಾಸಗಿ ಆಸ್ಪತ್ರೆಗಳ ಮೇಲೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸಾರ್ವಜನಿಕ ದೂರಿನ ಆಧಾರದ ಮೇಲೆ ಮಾಲಿನ್ಯ ನಿಯಂತ್ರಣ ಮಂಡಳಿ ಅವರಿಂದ ದಾಳಿ ನಡೆಸಿದ್ದು, ಮಾಲಿನ್ಯ ನಿಯಂತ್ರಣ ಮಂಡಳಿಯ ಗಿರೀಶ್ ಹಾಗೂ ಬಸವರಾಜ್ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ.
ದಾವಣಗೆರೆ ನಗರದ ನವೀನ್ ನಾಡಿಗ ಖಾಸಗಿ ಆಸ್ಪತ್ರೆ ಹಾಗೂ ಮೃತ್ಯುಂಜಯ ಖಾಸಗಿ ಆಸ್ಪತ್ರೆಗಳ ಮೇಲೆ ದಾಳಿ ನಡೆದಿದ್ದು, ಬಿಜೆಪಿಯ ಮಾಜಿ ಎಂಎಲ್ಸಿ ಶಿವಯೋಗಿಸ್ವಾಮಿ ಅವರ ಮೃತ್ಯುಂಜಯ ಕ್ಲಿನಿಕ್ ಇದಾಗಿದ್ದು, ಸರಿಯಾದ ನಿರ್ವಹಣೆ ಹಾಗೂ ಸ್ವಚ್ಛತೆ ಇಲ್ಲದ ಕಾರಣ ಅಧಿಕಾರಿಗಳಿಂದ ದಾಳಿ ನಡೆಸಿದ ಅಧಿಕಾರಿಗಳು ಖಾಸಗಿ ಆಸ್ಪತ್ರೆ ಮಾಲೀಕರ ಮೇಲೆ ಹರಿಹಾಯ್ದರು.