Publish Date: Thu, 04 Jan 2018 (11:17 IST)
Updated Date: Thu, 04 Jan 2018 (11:25 IST)
ದಾವಣಗೆರೆ : ಮಂಗಳೂರು ಹಿಂದುಪರ ಸಂಘಟನೆಯ ಕಾರ್ಯಕರ್ತ ಕಾಟಿಪಳ್ಳಿ ದೀಪಕ್ ರಾವ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ದಾವಣಗೆರೆಯಲ್ಲಿ ಹೇಳಿಕೆ ನೀಡಿದ್ದಾರೆ.
ಕಾಟಿಪಳ್ಳಿ ದೀಪಕ್ ರಾವ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದ ಹಿನ್ನಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರು’ ಒಂದು ಕಡೆ ಕೊಲೆಯಾಗುತ್ತಿದೆ. ಮತ್ತೊಂದು ಕಡೆ ಕೊಲೆಗಡುಕರಿಗೆ ರಕ್ಷಣೆ ನೀಡಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರದ ವೈಫಲ್ಯವೇ ಕಾರಣ. ನಿರಂತರವಾಗಿ ಮಂಗಳೂರಿನಲ್ಲಿ ಕೊಲೆಗಳು ನಡೆಯುತ್ತಿದ್ದು, ಜನರಿಗೆ ಪೊಲೀಸರ ಭಯವೇ ಇಲ್ಲ. ಇಂತಹ ಪ್ರಕರಣಗಳನ್ನು ತಡೆಯಲು ಸಿಎಂ ಸಿದ್ದರಾಮಯ್ಯ ಅವರಿಂದ ಸಾಧ್ಯವಾಗುತ್ತಿಲ್ಲ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ