Select Your Language

Notifications

webdunia
webdunia
webdunia
webdunia

ಮತ್ತೊಮ್ಮೆ ಬಿಜೆಪಿ ಸರ್ಕಾರ ನಿಶ್ಚಿತ : ಯಡಿಯೂರಪ್ಪ

ಮತ್ತೊಮ್ಮೆ ಬಿಜೆಪಿ ಸರ್ಕಾರ ನಿಶ್ಚಿತ : ಯಡಿಯೂರಪ್ಪ
ರಾಯಚೂರು , ಗುರುವಾರ, 9 ಫೆಬ್ರವರಿ 2023 (14:20 IST)
ರಾಯಚೂರು : ಪ್ರಧಾನಿ ಮೋದಿ ಮತ್ತು ಅಮಿತ್ ಶಾ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ಸ್ಪಷ್ಟ ಬಹುಮತದಿಂದ ಬಿಜೆಪಿ ಸರ್ಕಾರ ರಚಿಸುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ರಾಯಚೂರಿನ ಸಿಂಧನೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯಡಿಯೂರಪ್ಪ ಮಾತನಾಡಿ, ತಾವೇ ಮುಖ್ಯಮಂತ್ರಿ ಅಂತ ಕಾಂಗ್ರೆಸ್ನವರು ಓಡಾಡುತ್ತಿದ್ದಾರೆ. ಅದು ತಿರುಕನ ಕನಸು. ಅಧಿವೇಶನ ಮುಗಿದ ಮೇಲೆ ರಾಜ್ಯ ಪ್ರವಾಸ ಆರಂಭವಾಗುತ್ತದೆ. ಬಿಜೆಪಿ ಬಗ್ಗೆ ಜನರಿಗೆ ಒಲವು ಹೇಗಿದೆ ಅನ್ನೋದು ಈಗಾಗಲೇ ಗೊತ್ತಾಗಿದೆ ಎಂದರು.

ಎಸ್ಸಿ, ಎಸ್ಟಿ, ಹಿಂದುಳಿದ ಸಮುದಾಯಗಳಿಗೆ ಸಿಎಂ ಬೊಮ್ಮಾಯಿ ಮಾಡಿದ ಕೆಲಸಗಳು ಪಕ್ಷಕ್ಕೆ ಶಕ್ತಿ ತಂದುಕೊಡುತ್ತದೆ. ನಾವು ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ. ಅಧಿವೇಶನ ಬಳಿಕ 4 ಕಡೆಗಳಿಂದ ರಥಯಾತ್ರೆ ಆರಂಭಿಸುತ್ತೇವೆ. ಇಡೀ ರಾಜ್ಯ ಪ್ರವಾಸ ಮಾಡುತ್ತೇವೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಫೆ.12ರಂದು ಮುಸ್ಲಿಮರ ಬೃಹತ್ ಸಮಾವೇಶ