Publish Date: Mon, 17 Apr 2017 (17:14 IST)
Updated Date: Mon, 17 Apr 2017 (17:17 IST)
ನಗರದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬಿಟಿಎಂ ಲೇಔಟ್ ಪ್ರದೇಶದಲ್ಲಿ ಯುವತಿಯೊಬ್ಬಳು ಕೆಲಸ ಮುಗಿಸಿಕೊಂಡು ರಾತ್ರಿ ಮನೆಗೆ ಮರಳುತ್ತಿರುವಾಗ ಅಡ್ಡಗಟ್ಟಿದ ಕಾಮುಕರು ಅಕೆಗೆ ಲೈಂಗಿಕ ಕಿರುಕುಳ ನೀಡಿ ಬಟ್ಟೆ ಕೂಡಾ ಹರಿದಿದ್ದಾರೆ ಎನ್ನಲಾಗಿದೆ.
ಯುವತಿ ಕಾಮುಕರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಳಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಆಕೆಯ ಮೇಲೆ ಮುಗಿಬಿದ್ದ ಕಾಮುಕರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ಆರೋಪಿ ಕಾಮುಕರ ವಿರುದ್ಧ ಯುವತಿ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.