Select Your Language

Notifications

webdunia
webdunia
webdunia
webdunia

ಮುಂದೊಂದು ದಿನ ಭಾರತ, ಪಾಕ್ ಆಗಲಿದೆ: ಹಿಂದೂಗಳಿಗೆ ಎಚ್ಚರಿಕೆ ನೀಡಿದ ಕಲ್ಲಡ್ಕ ಭಟ್

ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್

Sampriya

ದಾವಣಗೆರೆ , ಶನಿವಾರ, 6 ಸೆಪ್ಟಂಬರ್ 2025 (19:00 IST)
ದಾವಣಗೆರೆ: ಹಿಂದೂಗಳ ಸಂಖ್ಯೆಯಲ್ಲಿ ಹೆಚ್ಚಾಗದೆ ಇದ್ದಿದ್ರೆ ಮುಂದೊಂದು ದಿನ ಭಾರತ ಪಾಕಿಸ್ತಾನ ಆಗಲಿದೆ ಎಂದು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಹೇಳಿದ್ದಾರೆ. 

ದಾವಣಗೆರೆಯಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಹಿಂದೂ ಸಂಸ್ಕೃತಿ ಸರ್ವನಾಶ ಮಾಡುವ ಪ್ರಯತ್ನ ನಡೆಯುತ್ತಿದೆ. ಸಂಘಪರಿವಾರ ನಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಸಂಕಲ್ಪವನ್ನು ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೊದಿ ಅವರು ಕೂಡಾ ಅದೇ ಕೆಲಸವನ್ನು ಮಾಡುತ್ತಿದ್ದಾರೆ ಎಂದರು. 

ದೇಶ ಉಳಿಯಬೇಕು, ಹಿಂದೂ ಸಂಸ್ಕೃತಿ ಉಳಿಯಬೇಕು ಎಂಬುದು ನಮ್ಮ ಆಶಯ. ಅದ್ದರಿಂದ ಹಿಂದೂಗಳ ಸಂಖ್ಯೆ ಹೆಚ್ಚಾಗಬೇಕಿದೆ. ದೇಶದಲ್ಲಿ ಮೆಕಾಲೆ ಶಿಕ್ಷಣ ಪ್ರಭಾವ ಹೆಚ್ಚಾಗಿದೆ. ಎಲ್ಲರೂ ತಮ್ಮ ಭಾಷೆಗಳನ್ನು ಬಿಟ್ಟು ಇಂಗ್ಲಿಷ್ ಕಲಿಯಲು ಶುರು ಮಾಡಿದ್ದಾರೆ. ಆದರೆ ನಮ್ಮ ಸಂಸ್ಕೃತಿ ಉಳಿಯಬೇಕಾಗಿದೆ ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಎನ್‌ಡಿಎ ಸಂಸದರಿಗೆ ಮೋದಿ ನಿವಾಸದಲ್ಲಿ ಆಯೋಜಿಸಿದ್ದ ಔತಣಕೂಟ ದಿಢೀರ್ ರದ್ದು, ಕಾರಣ ಏನು ಗೊತ್ತಾ