ನಗರದಲ್ಲಿ ಕಾಮುಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಸಾಗಿದೆ. ಇಂದು ರಸ್ತೆ ಬದಿಯಲ್ಲಿ ನಿಂತಿದ್ದ ಯುವತಿಯೊಬ್ಬಳಿಗೆ ಕಾಮುಕನೊಬ್ಬ ಕಿಸ್ ಕೊಟ್ಟು ಪರಾರಿಯಾಗಿದ್ದಾನೆ.
ಉತ್ತರ ಭಾರತದ ಯುವತಿಯೊಬ್ಬಳು ಶನಿವಾರದಂದು ರಾತ್ರಿ ಪಾರ್ಟಿ ಮುಗಿಸಿಕೊಂಡು ರಸ್ತೆ ಬದಿಯಲ್ಲಿ ಕ್ಯಾಬ್‌ಗಾಗಿ ಕಾಯುತ್ತಾ ನಿಂತಿದ್ದಾಗ ಕಾಮುಕನೊಬ್ಬ ಅಚಾನಕ್ಕಾಗಿ ಬಂದು ಆಕೆಗೆ ಕಿಸ್ ಕೊಟ್ಟು ಪರಾರಿಯಾದ ಘಟನೆ ವರದಿಯಾಗಿದೆ.
ಖಾಸಗಿ ಕಂಪೆನಿಯ ಕೆಲಸ ಮಾಡುತ್ತಿರುವ ಯುವತಿ ಘಟನೆಯಿಂದ ಬೆಚ್ಚಿ ಬಿದ್ದು, ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಘಟನೆ ನಡೆದ ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಕೆಲವು ಮಾಹಿತಿಗಳು ಲಭಿಸಿದ್ದು, ಶೀಘ್ರವೇ ಆರೋಪಿಯನ್ನು ಬಂಧಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.