Publish Date: Thu, 09 May 2024 (20:41 IST)
Updated Date: Fri, 10 May 2024 (13:49 IST)
ಬೆಂಗಳೂರು: ಈಗಾಗಲೇ ರಾಜ್ಯದ ಹಲವೆಡೆ ವರುಣನ ಆಗಮನವಿದ್ದು, ಇನ್ನೂ ಒಂದು ವಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಕೆಲವೆಡೆ ಗಾಳಿ ಸಹಿತ ಮಳೆಯಾಗಿದೆ.
ಹವಾಮಾನ ಇಲಾಖೆ ಪ್ರಕಾರ ನಾಳೆ ಚಾಮರಾಜನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.
ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಬೀಳಲಿದೆ.
ಸಸಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ಶಿವಮೊಗ್ಗ, ವಿಜಯನಗರ, ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಸ್ವಲ್ಪ ಮಳೆ ಬರಲಿದೆ.