ಬಿಜೆಪಿ ಸರಕಾರಕ್ಕೆ ಒಂದು ವರ್ಷ ಪೂರ್ಣ : ನೇರ ಪ್ರಸಾರ

Webdunia
ಭಾನುವಾರ, 26 ಜುಲೈ 2020 (12:57 IST)
ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಆಡಳಿತಕ್ಕೆ ಬಂದು ಒಂದು ವರ್ಷ ಪೂರ್ಣಗೊಂಡಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳಿಸಿರುವ  ಸಂದರ್ಭದಲ್ಲಿ ರಾಜ್ಯ ಮಟ್ಟದ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಜುಲೈ 27 ರಂದು ಬೆಳಗ್ಗೆ 11ಕ್ಕೆ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಸಮಾರಂಭ ನಡೆಯಲಿದೆ.

ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಈ ಕಾರ್ಯಕ್ರಮವು ಏಕಕಾಲಕ್ಕೆ ಬಿತ್ತರಗೊಳ್ಳಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೇಂದ್ರ ಕಚೇರಿಯು ಎಲ್ಲ ಜಿಲ್ಲಾಡಳಿತಗಳೊಡನೆ ಸಮನ್ವಯ ಸಾಧಿಸಿ ಕಾರ್ಯಕ್ರಮದ ನೇರ ಪ್ರಸಾರ ಆಯೋಜಿಸಿದೆ.

ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ಮತ್ತು ಮುಂದೆ ಆಗಬೇಕಾದ ಕೆಲಸಗಳು, ಪ್ರವಾಹ ಪರಿಹಾರ ಮತ್ತು ಕೊವಿಡ್-19 ಸೋಂಕು ನಿಯಂತ್ರಣ ಸೇರಿದಂತೆ ಅನೇಕ ವಿಷಯಗಳ ಕುರಿತು ರಾಜ್ಯದ ಜನರನ್ನು ಉದ್ದೇಶಿಸಿ  ಸಿಎಂ ಮಾತನಾಡುವರು. ವಿವಿಧ ಯೋಜನೆಗಳ ಜಿಲ್ಲಾ  ಫಲಾನುಭವಿಗಳೊಂದಿಗೆ ಸಿಎಂ  ಸಂವಾದ ನಡೆಸಲಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಗಳು ಹಾಗೆಲ್ಲಾ ಮಾಡಲ್ಲ: ಉಗ್ರ ಮಹಿಳಾ ನಾಯಕಿ ಡಾ ಶಾಹೀನ್ ತಂದೆಯ ವಾದ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಸವನಗುಡಿ ಕಡಲೆಕಾಯಿ ಪರಿಷೆ ಯಾವಾಗ ಆರಂಭ, ಈ ಬಾರಿ ಹೊಸ ನಿಯಮವೇನು ಇಲ್ಲಿದೆ ವಿವರ

ಬಿಹಾರ ಚುನಾವಣೆ ನಂತರ ರಾಹುಲ್ ಗಾಂಧಿ ಭವಿಷ್ಯವೇ ಬದಲಾಗಬಹುದು

ಆಪರೇಷನ್ ಸಿಂಧೂರ್ ಗೆ ಮೊದಲು ಆಪರೇಷನ್ indoor ಮಾಡಬೇಕಿದೆ

ಮುಂದಿನ ಸುದ್ದಿ
Show comments