Webdunia - Bharat's app for daily news and videos

Install App

ರಾಜ್ಯದಲ್ಲಿ ಆನ್‌ಲೈನ್ ಗೇಮಿಂಗ್ ಮತ್ತು ಗ್ಯಾಂಬ್ಲಿಂಗ್ ನಿಷೇಧ ಕಾಯಿದೆ

Webdunia
ಶುಕ್ರವಾರ, 12 ನವೆಂಬರ್ 2021 (21:21 IST)
ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಗೇಮಿಂಗ್ ಮತ್ತು ಗ್ಯಾಂಬ್ಲಿಂಗ್ ನಿಷೇಧ ಕಾಯಿದೆ ಜಾರಿಯಲ್ಲಿದ್ದರೂ ಸದ್ಯಕ್ಕೆ ಗೇಮಿಂಗ್ ಕಂಪನಿಗಳ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳುವುದಿಲ್ಲವೆಂಬ ರಾಜ್ಯ ಸರ್ಕಾರ ಹೈಕೋರ್ಟ್​ಗೆ ಮೌಖಿಕ ಭರವಸೆ ನೀಡಿದೆ.
ರಾಜ್ಯದಲ್ಲಿ ಆನ್ ಲೈನ್ ಗೇಮ್ ರದ್ದುಪಡಿಸಿ ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತಂದಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಆಲ್ ಇಂಡಿಯಾ ಗೇಮಿಂಗ್ ಫೆಡರೇಷನ್ ಹಾಗೂ ಇತರೆ ಗೇಮಿಂಗ್ ಕಂಪನಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರ ಈ ಭರವಸೆ ನೀಡಿದೆ.
ಅರ್ಜಿ ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಎಜಿ ಪ್ರಭುಲಿಂಗ ನಾವದಗಿ, ಏಕಸದಸ್ಯಪೀಠದ ಮುಂದೆ ಸಲ್ಲಿಸಿದ್ದ ಆಕ್ಷೇಪಣೆಗಳನ್ನು ಇಲ್ಲಿಯೂ ಪರಿಗಣಿಸಬೇಕು. ಅರ್ಜಿದಾರರ ಎಲ್ಲ ವಾದಕ್ಕೆ ಉತ್ತರ ನೀಡಲಾಗುವುದು ಎಂದರು.
ರಮ್ಮಿ ಫೆಡರೇಷನ್ ಪರ ಒಂದೂವರೆ ತಾಸಿಗೂ ಅಧಿಕ ಕಾಲ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ, ಸ್ಕಿಲ್ ಮತ್ತು ಚಾನ್ಸ್ ಎರಡು ಬಗೆಯ ಆಟಗಳಿದ್ದು, ಸ್ಕಿಲ್ ಗೇಮ್​ಗಳ ತಡೆಯುವಂತಿಲ್ಲ. ಆದರೂ, ಕರ್ನಾಟಕ ಸರ್ಕಾರ ನಿಷೇಧಿಸಿರುವ ಗೇಮ್​ನಲ್ಲಿ ಸ್ಕಿಲ್ ಕೂಡ ಸೇರಿಸಿರುವುದು ಸುಪ್ರೀಂಕೋರ್ಟ್ ಆದೇಶಕ್ಕೆ ವ್ಯತಿರಿಕ್ತವಾಗಿದೆ ಎಂದು ವಿವರಿಸಿದರು.
ವಾದ ಆಲಿಸಿದ ಪೀಠ ಸಮಯಾವಕಾಶದ ಕೊರತೆ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನ.18ಕ್ಕೆ ಮುಂದೂಡಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments