ಮಹದಾಯಿ ಮಧ್ಯಂತರ ತೀರ್ಪಿನಿಂದ ರಾಜ್ಯಕ್ಕೆ ಹಿನ್ನೆಡೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಅನ್ಯಾಯವಾಗಲು ಎಂದಿಗೂ ಬಿಡುವುದಿಲ್ಲ. ಕಾನೂನು ಹೋರಾಟ ಹಾಗೂ ಮಾತುಕತೆಯ ಮೂಲಕ ಮಾತ್ರ ವಿವಾದ ಇತ್ಯರ್ಥವಾಗುತ್ತದೆ ಎಂದು ಕೇಂದ್ರ ಸಂಸಧೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಮಹದಾಯಿ ನೀರು ತರಲು ಎಲ್ಲ ರೀತಿಯಿಂದಲು ಪ್ರಯತ್ನಿಸಿದ್ದೇವೆ. ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ಹೋರಾಟ ಕೈಗೊಂಡಿದ್ದೇವೆ ಎಂದು ತಿಳಿಸಿದರು.
ಉತ್ತರ ಕರ್ನಾಟಕ ಭಾಗದ ಜನರಿಗೆ ಮಹದಾಯಿ ನದಿ ನೀರು ಸಿಗಲೇ ಬೇಕು. ಈ ನಿಟ್ಟಿನಲ್ಲಿ ಎಲ್ಲ ರೀತಿಯ ಪ್ರಯತ್ನಗಳನ್ನು ನಡೆಸಿದ್ದೇವೆ. ಎಲ್ಲರು ಪಕ್ಷಾತೀತವಾಗಿ ಹೋರಾಟ ಮಾಡುವ ಅವಶ್ಯಕತೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಧಾರವಾಡ ಪೊಲೀಸರಿಂದ ಮಹದಾಹಿ ಹೋರಾಟಗಾರರ ಮೇಲಿನ ಅಮಾನವೀಯ ಹಲ್ಲೆಯನ್ನು ಖಂಡಿಸಿದ ಕೇಂದ್ರ ಸಂಸಧೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್, ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ ಅವರು ಕೂಡಲೇ ಮಧ್ಯ ಪ್ರವೇಶಿಸಿ ಇದನ್ನು ನಿಲ್ಲಿಸಲಿ ಎಂದು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ