ಬೆಳಗಾವಿ: ದಶಕದ ಬಳಿಕ ಗೋಕಾದಲ್ಲಿ ನಡೆದ ಅದ್ಧೂರಿ ಜಾತ್ರೆಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ಪುತ್ರ ಸಂತೋಷ, ಜನಸಂದಣಿಯ ಮಧ್ಯೆಯೇ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ.
ದಶಕದ ಬಳಿಕ ಗೋಕಾಕದಲ್ಲಿ ಅದ್ಧೂರಿ ಜಾತ್ರೆ ನಡೆಯುತ್ತಿದ್ದು, ಜಾರಕಿಹೊಳಿ ಕುಟುಂಬದವರೇ ಮುಂದಾಳತ್ವ ವಹಿಸಿದ್ದಾರೆ. ಉತ್ಸವದ ಆರನೇ ದಿನವಾದ ಶನಿವಾರ ಸಂತೋಷ ಜಾರಕಿಹೊಳಿ ಕೂಡ ಭಂಡಾರದ ಓಕುಳಿಯಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಬಂದೂಕು ಹಿಡಿದುಕೊಂಡು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾನೆ. ಸುತ್ತ ಸೇರಿದ್ದ ಅವರ ಬೆಂಬಲಿಗರೆಲ್ಲ ಮಹಾಲಕ್ಷ್ಮೀಗೆ ಜೈ ಎಂದು ಕೂಗಾಡಿ, ಕುಣಿದಾಡಿ ಸಂಭ್ರಮಿಸಿದರು. ಇದರ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದವು.
ಇದೀಗ ಈ ಸಂಬಂಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.