Publish Date: Wed, 01 May 2019 (08:34 IST)
Updated Date: Wed, 01 May 2019 (08:37 IST)
ಬೆಂಗಳೂರು : ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಆಪರೇಷನ್ ಹಸ್ತ ಕಾರ್ಯಾಚರಣೆಗೆ ಕೈಹಾಕಿದೆ ಎಂಬ ವಿಚಾರ ಆಡಿಯೋವೊಂದರಿಂದ ತಿಳಿದುಬಂದಿದೆ.
ನಾಗಠಾಣ ಕ್ಷೇತ್ರದ ಜೆಡಿಎಸ್ ಶಾಸಕ ದೇವಾನಂದ ಚೌಹಾಣ್ ವ್ಯಕ್ತಿಯೊಬ್ಬರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಇದರಲ್ಲಿ ದೇವರಹಿಪ್ಪರಗಿ ಕ್ಷೇತ್ರದ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ್ ತಯಾರಿದ್ದಾರೆ. ಗೃಹ ಸಚಿವರು ಆಹ್ವಾನಿಸಿದರೆ ಅವರು ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಗೆ ಬರಲು ಸಿದ್ಧರಿದ್ದಾರೆ ಎಂಬ ಸಂಭಾಷಣೆ ಇತ್ತು.
ಆದರೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ದೇವರಹಿಪ್ಪರಗಿ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ್, ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡಲ್ಲ. ಕಾಂಗ್ರೆಸ್ ಸೇರುವ ವಿಚಾರ ನನ್ನಲ್ಲಿಲ್ಲ. ಬುಧವಾರ ಸುದ್ಧಿಗೋಷ್ಠಿ ಕರೆದು ಸ್ಪಷ್ಟಪಡಿಸುತ್ತೇನೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.