Select Your Language

Notifications

webdunia
webdunia
webdunia
webdunia

ಧ್ವನಿವರ್ಧಕಗಳ ವಿರುದ್ಧ ರಾಜ್ಯದಲ್ಲೂ ಕಾರ್ಯಾಚರಣೆ

ಧ್ವನಿವರ್ಧಕಗಳ ವಿರುದ್ಧ ರಾಜ್ಯದಲ್ಲೂ ಕಾರ್ಯಾಚರಣೆ
ಬೆಂಗಳೂರು , ಮಂಗಳವಾರ, 10 ಮೇ 2022 (11:11 IST)
ಬೆಂಗಳೂರು : ಅಕ್ರಮವಾಗಿ ಅಳವಡಿಸಿರುವ ಧ್ವನಿವರ್ಧಕಗಳನ್ನು ಯಾವ ಸಮಯದಲ್ಲಿ ಬಳಸಬೇಕು ಎಂಬುವುದನ್ನು ಅರ್ಜಿ ಹಾಕಿ ಹೈಕೋರ್ಟ್,

ಸುಪ್ರೀಂಕೋರ್ಟ್ನಿಂದ ಅನುಮತಿ ಪಡೆಯಬೇಕು ಇಲ್ಲದಿದ್ದರೆ, 15 ದಿನಗಳ ಬಳಿಕ ಅನಧಿಕೃತ ಮೈಕ್ಗಳನ್ನು ತೆರವುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತಂತೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಿ ಮಾತನಾಡಿದ ಅವರು, ಅಕ್ರಮವಾಗಿ ಧ್ವನಿವರ್ಧಕಗಳನ್ನು ಹಾಕಿರುವವರು ಅರ್ಜಿ ಸಲ್ಲಿಸಿ ಯಾವ, ಯಾವ ಡೆಸಿಬಲ್ ಯಾವ ಟೈಮ್ನಲ್ಲಿ ಬಳಸಬೇಕು ಎನ್ನುವುದನ್ನು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು.

ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಒಂದು ಡೆಸಿಬಲ್, ರಾತ್ರಿ 10 ಗಂಟೆಯಿಂದ 6 ಗಂಟೆವರೆಗೆ ಒಂದು ಪ್ರಮಾಣದಂತೆ ಅನುಸರಿಸಬೇಕು. ಇದು ಕೇವಲ ಹಿಂದೂ ಧಾರ್ಮಿಕ ಅಥವಾ ಮುಸ್ಲಿಂ ಧಾರ್ಮಿಕ ಧ್ವನಿವರ್ಧಕಗಳಿಗೆ ಮಾತ್ರ ಅನ್ವಯವಾಗುವುದಿಲ್ಲ.

ಬದಲಾಗಿ ಸಾರ್ವಜನಿಕ ಕಾರ್ಯಕ್ರಮಗಳಿಗೂ ಈ ನಿಯಮ ಅನ್ವಯವಾಗುತ್ತದೆ. ಧ್ವನಿವರ್ಧಕ ಮಿತಿ ಪ್ರಮಾಣದಲ್ಲಿ ಬಳಸಬೇಕು ಎಂದಿದ್ದಾರೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಮದುವೆ ಕಾಗದ ಹಂಚುತ್ತಿದ್ದ ಯುವತಿಯನ್ನು ಅಪಹರಿಸಿ ಅತ್ಯಾಚಾರ