Publish Date: Sun, 27 Jan 2019 (14:49 IST)
Updated Date: Sun, 27 Jan 2019 (14:56 IST)
ನವದೆಹಲಿ : ರಾಜ್ಯದಲ್ಲಿ ಬಿಜೆಪಿಯವರ ಆಪರೇಷನ್ ಕಮಲ ಪ್ರಕ್ರಿಯೆ ಇನ್ನು ಪ್ರಗತಿಯಲ್ಲಿದೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ‘ಬಿಜೆಪಿ ಆಪರೇಷನ್ ಕಮಲ ಮಾಡುವ ಉದ್ದೇಶದಿಂದ ರೆಸಾರ್ಟ್ ರಾಜಕಾರಣ ಆರಂಭಿಸಿತ್ತು. ಇದಕ್ಕಾಗಿ ಬಿಜೆಪಿಯ ಬಹುತೇಕ ಶಾಸಕರು ಗುರುಗ್ರಾಮದ ರೆಸಾರ್ಟ್ ನಲ್ಲಿ ತಂಗಿದ್ದರು. ಇತ್ತ ಕೈ ಶಾಸಕರೂ ಮುಂಬೈನ ಹೋಟೆಲ್ ನಲ್ಲಿ ಉಳಿದುಕೊಂಡಿದ್ದರು. ಆದರೆ ಆಪರೇಷನ್ ಕಮಲ ಯಶಸ್ಸು ಕಂಡಿರಲಿಲ್ಲ ಎಂದು ಹೇಳಿದ್ದಾರೆ.
ಸರ್ಕಾರ ಬೀಳಿಸಲು ಬಿಜೆಪಿ, ಆರ್ ಎಸ್‌ಎಸ್ ಹಾಗೂ ಕೇಂದ್ರ ಸರ್ಕಾರದ ಕೆಲ ನಾಯಕರು ಪ್ರಯತ್ನಿಸುತ್ತಿದ್ದಾರೆ. ಈ ಮೂಲಕ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಹೇರುವ ಪ್ರಯತ್ನದಲ್ಲಿ ಬಿಜೆಪಿ ಇದೆ. ಆದರೆ ಇದು ಕನಸಾಗಿಯೇ ಉಳಿಯಲಿದೆ ಎಂದು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.