Select Your Language

Notifications

webdunia
webdunia
webdunia
webdunia

Operation Sindoor: ರಾಜ್ಯ ಸರ್ಕಾರದಿಂದ ನಾಳೆ ತಿರಂಗಾ ಯಾತ್ರೆ

ಆಪರೇಷನ್ ಸಿಂಧೂರ

Sampriya

ಬೆಂಗಳೂರು , ಗುರುವಾರ, 8 ಮೇ 2025 (18:10 IST)
ಬೆಂಗಳೂರು: ಪಹಲ್ಗಾಮ್‌ನಲ್ಲಿ ನಡೆದ ನರಮೇಧಕ್ಕೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸಲುರಾಜ್ಯ ಸರ್ಕಾರ ತಿರಂಗಾ ಯಾತ್ರೆಯನ್ನು ಹಮ್ಮಿಕೊಂಡಿದೆ.

ಶುಕ್ರವಾರ ಬೆಳಗ್ಗೆ 9.30 ರಿಂದ 10.30 ರವರೆಗೆ ಬೆಂಗಳೂರಿನ ಕೆ.ಆರ್. ವೃತ್ತದಿಂದ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಬಳಿ ಇರುವ ಮಿನ್ಸ್ಕ್ ಸ್ಕ್ವೇರ್ ವರೆಗೆ 'ತಿರಂಗಾ ಯಾತ್ರೆ'ಯನ್ನು  ಹಮ್ಮಿಕೊಳ್ಳಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯುವ ಈ ಯಾತ್ರೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು, ಸರಕಾರಿ, ಖಾಸಗಿ ಉದ್ದಿಮೆಗಳ ನೌಕರರು, ಸಾಹಿತಿಗಳು, ಚಿಂತಕರು, ಚಿತ್ರರಂಗದವರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಸರ್ವರೂ ಭಾಗವಹಿಸಲು ಮುಕ್ತ ಆಹ್ವಾನ ನೀಡಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಭಾರತ ದಾಳಿ ಭೀತಿ: ಲಾಹೋರ್‌ನಿಂದ ಕೂಡಲೇ ಹೊರಡುವಂತೆ ನಾಗರಿಕರಿಗೆ ಯುಎಸ್‌ ಸೂಚನೆ