Select Your Language

Notifications

webdunia
webdunia
webdunia
webdunia

ಪೂಜೆಗೆ ಅವಕಾಶ: ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ ಪೂಜಾರಿ ಸ್ಪಷ್ಟನೆ

ಪೂಜೆಗೆ ಅವಕಾಶ: ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ ಪೂಜಾರಿ ಸ್ಪಷ್ಟನೆ
bangalore , ಭಾನುವಾರ, 16 ಜನವರಿ 2022 (20:17 IST)
ಕೊಡಗು:-ಕೊಡಗಿನ ಪುಣ್ಯಕ್ಷೇತ್ರ ಭಾಗಮಂಡಲದಲ್ಲಿ ಕೋವಿಡ್ ನಿಯಮಾವಳಿಗೆ ಒಳಪಟ್ಟು ಪಿಂಡ ಪ್ರದಾನ ಹಾಗೂ ಶಾಂತಿ ಪೂಜೆಗೆ ಅವಕಾಶ ಕಲ್ಪಿಸುವಂತೆ ಜಿಲ್ಲಾ ಉಸ್ತವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಅವರಿಗೆ ನಡೆದಿದೆ.
ಶಾಸಕ ಎಂ.ಪಿ.ಅಪಚ್ಚುರಂಜನ್ ಅವರು ಮಾತನಾಡಿ ಕೋವಿಡ್ ನಿಯಮಗಳನ್ನು ಅನುಸರಿಸಿ ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ಪಿಂಡ ಪ್ರದಾನ ಹಾಗೂ ಶಾಂತಿ ಪೂಜೆಗೆ ಅವಕಾಶ ಮಾಡಬೇಕು ಎಂದು ವಿಷಯ ಪ್ರಸ್ತಾಪಿಸಿದರು.
ಇದಕ್ಕೆ ಧ್ವನಿಗೂಡಿಸಿದ ಶಾಸಕ ಕೆ.ಜಿ.ಬೋಪಯ್ಯ ಅವರು, ಪ್ರತಿನಿತ್ಯ 10 ರಿಂದ 15 ಕುಟುಂಬಗಳು ಪಿಂಡ ಪ್ರದಾನ ಹಾಗೂ ಶಾಂತಿ ಪೂಜೆಗೆ ಆಗಮಿಸಲಿದ್ದು, ಈ ಕಾರ್ಯಕ್ಕೆ ಅವಕಾಶ ಮಾಡಬೇಕು. ಸ್ಥಳೀಯರಿಗೆ ಪೂಜಾ ಕಾರ್ಯದಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಗಮನಹರಿಸಬೇಕು ಎಂದು ಸಲಹೆ ಮಾಡಿದರು.
ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರು ಮಾತನಾಡಿ ಪಿಂಡ ಪ್ರದಾನ ಹಾಗೂ ಶಾಂತಿ ಪೂಜೆಗೆ ಅವಕಾಶ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭ ಕೋವಿಡ್ ನಿಯಮಾವಳಿಗೆ ಒಳಪಟ್ಟು ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪಿಂಡ ಪ್ರದಾನ ಮತ್ತು ಶಾಂತಿ ಪೂಜೆಗೆ ಅವಕಾಶ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು.
ರೆಸಾರ್ಟ್ ಸಿಬ್ಬಂದಿಗಳಿಗೆ ಕೋವಿಡ್ ಸೋಂಕು ಇದ್ದರೆ ರೆಸಾರ್ಟ್ ಕೂಡ ಒಂದು ವಾರ ಬಂದ್ ಮಾಡಲು ಸಚಿವರು ಆದೇಶಿಸಿದರು.
 
ಪ್ರವಾಹ ಸಂತ್ರಸ್ತರಿಗೆ ಪರಿಹಾರ:
 
ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ಮಾತನಾಡಿ ನೆಲ್ಯಹುದಿಕೇರಿ, ಅಭ್ಯತ್ಮಂಗಲ ಭಾಗದಲ್ಲಿ ಪ್ರವಾಹಕ್ಕೆ ತುತ್ತಾಗುವ ಕುಟುಂಬಗಳಿಗೆ ನಿವೇಶನ ಒದಗಿಸುವ ನಿವೇಶನ 30 ರಿಂದ 40 ಪೈಸಾರಿ ಜಾಗ ಗುರುತಿಸಲಾಗಿದೆ. ಆ ವಿನ್ಯಾಸ ಆರ್ಟಿಸಿ ಒದಗಿಸಬೇಕು ಎಂದು ಹೇಳಿದರು.
ಧ್ವನಿಗೂಡಿಸಿದ ಕೆ.ಜಿ.ಬೋಪಯ್ಯ ಅವರು ಸಿದ್ದಾಪುರ ಮತ್ತು ಕರಡಿಗೋಡುವಿನ ಪ್ರವಾಹ ಪೀಡಿತ ಕುಟುಂಬಗಳಿಗೆ ನೆಲೆ ಒದಗಿಸಬೇಕಾಗಿದೆ. ಹಾಗೆಯೇ ಅಯ್ಯಪ್ಪ ಬೆಟ್ಟದಲ್ಲಿನ ಕುಟುಂಬಗಳನ್ನು ಸ್ಥಳಾಂತರಿಸಬೇಕಾಗಿದೆ. ನಿಮಗೆ ಜಾಗ ಒದಗಿಸಬೇಕಾಗಿದೆ.
ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ, ಮಳೆ ಹಾನಿಗೆ ತುತ್ತಾದ ಮನೆಗಳಿಗೆ ಪರಿಹಾರ ವಿತರಿಸಬೇಕು. ಬೆಳೆ ಹಾನಿ ಪರಿಹಾರ ಸರ್ಕಾರ ಇದುವರೆಗೆ 13ನೇ ಹಂತದಲ್ಲಿ 63.59 ಕೋಟಿ ರೂ. ಬಿಡುಗಡೆ ಮಾಡಿ ಅರ್ಹರಿಗೆ ವರ್ಗಾವಣೆಯಾಗಿದೆ ಎಂದು ಹೇಳಿದರು.
ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯಂಡ ರವಿಕುಶಾಲಪ್ಪ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಅತಿಥಿ ಉಪನ್ಯಾಸಕರಿಗೆ ಸಿಹಿಯಲ್ಲ; ಸರಕಾರಿ ಆದೇಶ ಜಾರಿಯಾದರೆ 7500 ಮಂದಿ ಕೆಲಸಕ್ಕೆ ಖೋತಾ!