Publish Date: Wed, 06 May 2020 (22:06 IST)
Updated Date: Wed, 06 May 2020 (22:08 IST)
ಗ್ರೀನ್ ಜೋನ್ ಅಲ್ಲಿ ವಾರಪೂರ್ತಿ ಅವಕಾಶ ಕೊಡಲಾಗಿದೆ.
ದೇಶಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ರಾಜ್ಯದಲ್ಲೂ ಮೇ 17 ರವರೆಗೆ ಮುಂದುವರಿಸಲಾಗಿದೆ. ಆದರೆ ಹಾಸನ ಗ್ರೀನ್ ಜೋನ್ ನಲ್ಲಿರುವ ಕಾರಣದಿಂದ ಲಾಕ್ ಡೌನ್ ಅನ್ನು ಸಡಿಲಿಕೆ ಮಾಡಿ ಬಹುತೇಕ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿತ್ತು. ಈ ಹಿಂದೆ ವಾರದಲ್ಲಿ ಮೂರು ದಿನ ಮಾತ್ರ ಅನುಮತಿ ನೀಡಲಾಗಿರುವ ವ್ಯಾಪಾರ ವ್ಯವಹಾರ ಚಟುವಟಿಕೆಗಳನ್ನು ಇನ್ನು ಮುಂದೆ ವಾರಪೂರ್ತಿ ನಡೆಸಲು ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.
ಆದರೆ ಈ ಸಂದರ್ಭದಲ್ಲಿ ಅಂಗಡಿ ಮುಗ್ಗಟ್ಟುಗಳ ಮಾಲೀಕರುಗಳ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಕೈಗವಸು, ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಬೇಕು ಎಂದು ಅವರು ಸೂಚನೆ ನೀಡಿದ್ದಾರೆ.
ನಿಯಮಗಳನ್ನು ಉಲ್ಲಂಘನೆ ಮಾಡಿದಲ್ಲಿ ಸ್ಥಳೀಯ ಸಂಸ್ಥೆಗಳು, ಪೊಲೀಸ್ ಇಲಾಖೆ ತಪ್ಪಿತಸ್ಥರ ವಿರುದ್ಧ ದಂಡ ವಿಧಿಸುವುದು ಮತ್ತು ಕಾನೂನು ಕ್ರಮ ಜರುಗಿಸಲು ಅವಕಾಶವಿರುತ್ತದೆ ಎಂದಿದ್ದಾರೆ.