Webdunia - Bharat's app for daily news and videos

Install App

ನವೆಂಬರ್ 20ರವರೆಗೆ ಮತದಾರರ ಕರಡು ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

Webdunia
ಶನಿವಾರ, 27 ಅಕ್ಟೋಬರ್ 2018 (17:34 IST)
ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದ್ದು, ನವೆಂಬರ್ 20ರವರೆಗೆ ಕರಡು ಪಟ್ಟಿ ಪರಿಷ್ಕರಣೆ ಕಾರ್ಯ ಕೈಗೊಳ್ಳಲಾಗುವುದು. ಕರಡು ಮತದಾರರ ಪಟ್ಟಿಗೆ ಮತದಾರರು ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಮತದಾರರ ಪಟ್ಟಿ ಪರಿಷ್ಕರಣಾ ವೀಕ್ಷಕ ಹಾಗೂ ಪ್ರಾದೇಶಿಕ ಆಯುಕ್ತ ತಿಳಿಸಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರೆದ 2019ನೇ ಸಾಲಿನ ಮತದಾರರ ಪಟ್ಟಿ ಪರಿಷ್ಕರಣೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ, ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳ ತಿದ್ದುಪಡಿ, ವರ್ಗಾವಣೆ, ಹೆಸರು ತೆಗೆದು ಹಾಕುವ ಬಗ್ಗೆ ನವೆಂಬರ್ 20ರೊಳಗಾಗಿ ಸಂಬಂಧಿಸಿದ ಭೂತ ಮಟ್ಟದ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಲು ಸಾಧ್ಯವಾಗುವುದಿಲ್ಲ ಎಂದರು.

ಮತದಾರರ ಕರಡು ಪಟ್ಟಿ ಪರಿಷ್ಕರಣೆ ಕಾರ್ಯವು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು. ಈ ಹಂತದಲ್ಲಿ ಮತದಾರರ ಪಟ್ಟಿಯನ್ನು ಸರಿಯಾಗಿ ಪರಿಷ್ಕರಣೆ ಮಾಡಿದರೆ ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದ ನಂತರ ಯಾವುದೇ ತೊಂದರೆಗಳು ಉದ್ಭವಿಸುವುದಿಲ್ಲ ಹಾಗೂ  ಮತದಾರರ ಪಟ್ಟಿ ಪರಿಷ್ಕರಣೆಗೆ ಅಂತಿಮ ಹಂತದಲ್ಲಿ ಗೊಂದಲಗಳು ಉಂಟಾಗುವುದಿಲ್ಲ.  ಮತದಾರರು ಆನ್‍ಲೈನ್‍ನಲ್ಲಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಿದ್ದಲ್ಲಿ ಅವರಿಗೆ ಸ್ವೀಕೃತಿ ಮತ್ತು ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ಸಿಗುವಂತಾಗಬೇಕು ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

Chinnaswamy Stampede: ಗೋವಿಂದರಾಜ್‌ಗೆ ಗೇಟ್‌ಪಾಸ್‌: ಸರ್ಕಾರಕ್ಕೆ ಜ್ಞಾನೋದಯವಾಯ್ತು ಎಂದ ಎಚ್‌ಡಿಕೆ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

ಮುಂದಿನ ಸುದ್ದಿ
Show comments