Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯರಿಂದ ತುಘಲಕ್ ದರ್ಬಾರ್: ಜಗದೀಶ್ ಶೆಟ್ಟರ್

Webdunia
ಸೋಮವಾರ, 21 ನವೆಂಬರ್ 2016 (11:49 IST)
ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಪ್ರಾರಂಭವಾದ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ರೈತರನ್ನು ವಶಕ್ಕೆ ಪಡೆದಿರುವುದನ್ನು ಖಂಡಿಸಿದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಇದು ತುಘಲಕ್ ಸರಕಾರ, ರೈತ ವಿರೋಧಿ ಸರಕಾರ, ಇಂತಹ ಸರಕಾರವನ್ನು ಹಿಂದೆಂದೂ ನೋಡಿಲ್ಲ ಎಂದು ಕಿಡಿಕಾರಿದರು. 
 
ಬಂಧಿತ ರೈತರನ್ನು ಈ ಕೂಡಲೇ ಬಿಡುಗಡೆ ಮಾಡಬೇಕು. ರಾಜ್ಯ ಸರಕಾರ ರೈತರ ಬೇಡಿಕೆಯನ್ನು ಈಡೇರಿಸಿದರೆ ಅವರೇಕೆ ಪ್ರತಿಭಟನೆ ಮಾಡುತ್ತಾರೆ. ಮೊದಲು ರೈತರ ಬೇಡಿಕೆಗಳನ್ನು ಈಡೇರಿಸಲಿ ಎಂದು ಆಗ್ರಹಿಸಿದರು.
 
ಈ ಹಂತದಲ್ಲಿ ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ರೈತರನ್ನು ವಶಕ್ಕೆ ಪಡೆದಿದ್ದಾರೆ. ಅವರನ್ನು ಬಂಧಿಸಿಲ್ಲ. ಜೈಲಿಗೆ ಹಾಕಿಲ್ಲ. ಅವರ ಮೇಲೆ ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದು ಸ್ಪಷ್ಟಪಡಿಸಿದರು.
 
ಇಂದು ಮುಂಜಾನೆ 9.30ಕ್ಕೆ ಬಂಧಿತ ರೈತರನ್ನು ಬಿಡುಗಡೆಗೊಳಿಸುವಂತೆ ಇಲಾಖೆಗೆ ಸೂಚನೆ ನೀಡಿದ್ದೇನೆ. ಇದರಿಂದ ತೃಪ್ತರಾದ ಬಿಜೆಪಿ ನಾಯಕರು ತಮ್ಮ ಸ್ಥಾನಗಳಿಗೆ ತೆರಳಿದಾಗ ಕಾವೇರಿದ ವಾತಾವರಣ ತಿಳಿಗೊಂಡಿತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments