ಗ್ರಾಮೀಣಾಭಿವೃದ್ಧಿ ಇಲಾಖೆ ಪೀಠೊಪಕರಣ ಖರೀದಿಯಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆಸಿದೆ ಎಂದು ಬೆಂಗಳೂರಿನಲ್ಲಿ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಗಂಭೀರವಾಗಿ ಆರೋಪಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಇಲಾಖೆ ಪೀಠೊಪಕರಣ ಖರೀದಿಯಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ಎಸಗಿದ್ದು, ತಮ್ಮಗೆ ಆತ್ಮೀಯರಾಗಿರುವವರಿಗೆ ಟೆಂಡರ್ ನೀಡಿದ್ದು, ಮಾರುಕಟ್ಟೆಯ ಮೂಲ ಬೆಲೆಗಿಂತ ಎರಡು ಪಟ್ಟು ಬಿಲ್ ತೊರಿಸಿ ಭ್ರಷ್ಟಾಚಾರ ಎಸಗಿದ್ದಾರೆ. ಇದರಿಂದ ಸರಕಾರದ ಬೊಕ್ಕಸಕ್ಕೆ 17.50 ಕೋಟಿ ನಷ್ಟ ಸಂಭವಿಸಿದೆ ಎಂದು ಶಟ್ಟರ್ ಆರೋಪಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಸರಕಾರದ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತೇದೆ. ಭ್ರಷ್ಟಾಚಾರದ ನೈತಿಕ ಹೊಣೆ ಹೊತ್ತು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.