Select Your Language

Notifications

webdunia
webdunia
webdunia
webdunia

ರಾಜ್ಯ ಪೊಲೀಸರಿಗೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಬಲ

ರಾಜ್ಯ ಪೊಲೀಸರಿಗೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಬಲ
ಬೆಂಗಳೂರು , ಶನಿವಾರ, 28 ಮೇ 2016 (15:00 IST)
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜೂನ್ 4 ರಂದು, ರಾಜ್ಯಾದ್ಯಂತ ಪೊಲೀಸರು ಕೈಗೊಂಡಿರುವ ಸಾಮೂಹಿಕ ಪ್ರತಿಭಟನೆಗೆ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಬೆಂಬಲ ವ್ಯಕ್ತಪಡಿಸಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ರಾಜ್ಯ ಸರಕಾರ ಪೊಲೀಸರ ಸಮಸ್ಯೆಗಳಿಗೆ ಸ್ಪಂದಿಸದ ಕಾರಣ ಪೊಲೀಸರು ಬೀದಿಗಿಳಿದು ಹೋರಾಡುವ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯದ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಪೊಲೀಸರು ಪ್ರತಿಭಟನೆಗೆ ಮುಂದಾಗಿದ್ದಾರೆ. ಸರಕಾರದ ನೀತಿ ನಿಯಮಗಳು ಹೇಗೆ ಮುಂದುವರೆದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತದೆ ಎಂದು ಹೇಳಿದ್ದರು.
 
ಪೊಲೀಸರ ಸಮಸ್ಯೆಗಳ ಕುರಿತು ರಾಜ್ಯ ಸರಕಾರ ಚರ್ಚೆ ನಡೆಸಿ, ಅರಿಗೆ ನ್ಯಾಯಯುತವಾದ ಪರಿಹಾರ ಒದಗಿಸಲಿ. ಪೊಲೀಸರ ಬೇಡಿಕೆ ಈಡೇರದಿದ್ದರೆ ಅವರು ಹೋರಾಟ ನಡೆಸುವುದು ಅನಿವಾರ್ಯ ಅವರಿಗೆ ನಮ್ಮ ಬೆಂಬಲ ಇದ್ದೆ ಇರುತ್ತದೆ ಎಂದು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
 
ರಾಜ್ಯಸಭೆಗೆ ವೆಂಕಯ್ಯ ನಾಯ್ಡು ಆಯ್ಕೆ ವಿಚಾರವಾಗಿ ಮಾತನಾಡಿದ ಅವರು ರಾಜ್ಯಸಭೆಗೆ ಅಭ್ಯರ್ಥಿಗಳನ್ನು ಆಯ್ಕೆಮಾಡುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಷಯವಾಗಿದೆ. ರಾಜ್ಯದಿಂದ ವೆಂಕಯ್ಯ ನಾಯ್ಡು ನಾಮಪತ್ರ ಸಲ್ಲಿಸುವ ಕುರಿತು ನನಗೆ ಯಾವುದೆ ಮಾಹಿತಿ ಲಭ್ಯವಿಲ್ಲ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಿದ್ದರಾಮಯ್ಯಗೆ ದೇವರು, ಸ್ವಾಮಿಗಳ ಮೇಲೆ ಭಕ್ತಿ ಹೆಚ್ಚಾಗಿದೆ: ಈಶ್ವರಪ್ಪ ಲೇವಡಿ