Select Your Language

Notifications

webdunia
webdunia
webdunia
webdunia

ವಿಪಕ್ಷ ನಾಯಕರು ಮಾತಿನಲ್ಲೇ ಮಂಟಪ ಕಟ್ಟಿಸುತ್ತಿದ್ದಾರೆ;ಬೊಮ್ಮಾಯಿ

webdunia
ಬೆಂಗಳೂರು , ಶನಿವಾರ, 23 ಅಕ್ಟೋಬರ್ 2021 (13:07 IST)
ಹಾವೇರಿ : ಚುನಾವಣಾ ಪ್ರಚಾರಕ್ಕೆಂದು ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಿಂದ ಹಾನಗಲ್ಗೆ ಆಗಮಿಸಿದ್ದಾರೆ. ಈ ವೇಳೆ ಮಾತನಾಡಿದ ಬೊಮ್ಮಾಯಿ, ವಿಪಕ್ಷ ನಾಯಕರು ಮಾತಿನಲ್ಲೇ ಮಂಟಪ ಕಟ್ಟಿಸುತ್ತಿದ್ದಾರೆ.
ಅವರು ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಅಂತ ಹೇಳಿಕೆ ನೀಡಿದರು. ಇನ್ನು ಸಿಎಂ ಬೊಮ್ಮಾಯಿ, ಬಿಎಸ್ವೈ ಜಂಟಿ ಪ್ರಚಾರ ವಿಚಾರಕ್ಕೆ ಪ್ರತಿಕ್ರಿಯಿಸಿದ ರಾಜ್ಯದ ಮುಖ್ಯಮಂತ್ರಿ, ಕಾಂಗ್ರೆಸ್ನಲ್ಲಿ ಡಿಕೆಶಿ, ಸಿದ್ದರಾಮಯ್ಯರಿಂದ ಜಂಟಿ ಪ್ರಚಾರ ಮಾಡುತ್ತಿಲ್ವಾ? ಅಂತ ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ, ಹೆಚ್ಡಿ ಕುಮಾರಸ್ವಾಮಿ ಪಂಥಾಹ್ವಾನ ವಿಚಾರದ ಬಗ್ಗೆ ಮಾತನಾಡಿದ ಅವರು, ಅವರದು ಮಾತಿನ ಮಂಟಪ ಎಂದು ತಿರುಗೇಟು ನೀಡಿದ್ದಾರೆ. ವಿಧಾನಸೌಧದ ವೇದಿಕೆಯೇ ದೊಡ್ಡ ಅಖಾಡ. ವಿಧಾನಸೌಧದಲ್ಲಿಯೇ ಬಹಿರಂಗ ಚರ್ಚೆ ಮಾಡಲಿ. ನಾವು ಮಾಡಿದ್ದನ್ನು ನಿನ್ನೆಯೇ ದಾಖಲೆ ಸಮೇತ ಹೇಳಿದ್ದೇನೆ. ಕೆಲವು ಊರುಗಳ ಹೆಸರನ್ನು ಕೂಡ ಉಲ್ಲೇಖಿಸಿದ್ದೇನೆ. ವಿಪಕ್ಷದವರು ಅಲ್ಲಿಗೆ ಹೋಗಿ ನೋಡಿಕೊಂಡು ಬರಲಿ ಅಂತ ಹಾನಗಲ್ನಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಗನಿಂದ ಡಬಲ್ ಮರ್ಡರ್! ಕಾರಣವೇನು?