Webdunia - Bharat's app for daily news and videos

Install App

ವಿರೋಧಿಗಳ ಎದೆ ಒಡೆಯುವ ರೀತಿಯಲ್ಲಿ ಬ್ರಿಗೇಡ್ ಸಮಾವೇಶ: ಬಿಎಸ್‌ವೈಗೆ ಪರೋಕ್ಷ ಟಾಂಗ್

Webdunia
ಶನಿವಾರ, 1 ಅಕ್ಟೋಬರ್ 2016 (16:44 IST)
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪನೆ ಮಾಡಲು ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ನನ್ನ ವಿರೋಧಿಗಳ ಎದೆ ಒಡೆಯುವ ರೀತಿಯಲ್ಲಿ ಬ್ರಿಗೇಡ್ ಸಮಾವೇಶ ನಡೆದಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪನವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. 
 
ಇಂದು ಹಾವೇರಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಬೃಹತ್ ಸಮಾವೇಶ ನಡೆಯಿತು. ಸಮಾವೇಶ ಉದ್ದೇಶಿಸಿ ಮಾತನಾಡಿದ ಈಶ್ವರಪ್ಪನವರು, ಸಮಾವೇಶದಲ್ಲಿ ನೇರೆದಿರುವ ಜನರನ್ನು ನೋಡಿ ನನ್ನ ಆತ್ಮಸ್ಥೈರ್ಯ ಮತ್ತಷ್ಟು ಹೆಚ್ಚಿದೆ. ಕೆಲವರು ಹಾವೇರಿಯಲ್ಲಿ ಬ್ರಿಗೇಡ್ ಸಮಾವೇಶ ಮಾಡಲು ವಿರೋಧ ವ್ಯಕ್ತಪಡಿಸಿದ್ದರು. ಅವರಿಗೆ ಸಮಾವೇಶದಲ್ಲಿ ನೆರೆದಿರುವ ಜನತೆ ಕೇವಲ ಸ್ಯಾಂಪಲ್ ತೋರಿಸಿದ್ದಾರೆ ಎಂದು ಲೇವಡಿ ಮಾಡಿದರು. 
 
ಜನವರಿಯಲ್ಲಿ ಕೂಡಲ ಸಂಗಮದಲ್ಲಿ ನಡೆಯುವ ಸಮಾವೇಶದಲ್ಲಿ 5 ಲಕ್ಷಕ್ಕೂ ಅಧಿಕ ಜನರು ಬ್ರಿಗೇಡ್ ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಚೆನ್ನಮ್ಮನ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ. 2018 ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತಂದೇ ತರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
 
ಕಾಂಗ್ರೆಸ್ ವಿರುದ್ಧ ವಾಗ್ದಾಳಿ.............
 
ಕಾಗ್ರೆಸ್ ಜಾತಿಯ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿದೆ. ಸ್ವಾತಂತ್ರ್ಯ ಬಂದಾಗಿನಿಂದಲೂ ಕಾಂಗ್ರೆಸ್ ಹಿಂದ ಸಮಾಜವನ್ನು ತುಳಿಯುವಂತಹ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವನ್ನು ನಿರ್ನಾಮ ಮಾಡಬೇಕು ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದರು. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ದೂರುಗಳ ಬೆನ್ನಲ್ಲೇ ಮುರುಡೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

ಮೋದಿ ಸರ್ಕಾರದಿಂದ ಅಘೋಷಿತ ತುರ್ತು ಪರಿಸ್ಥಿತಿ ಎಂದ ಜೈರಾಂ ರಮೇಶ್: ನೀವ್ಯಾಕೆ ಅರೆಸ್ಟ್ ಆಗಿಲ್ಲ ಎಂದು ಪಬ್ಲಿಕ್

ಅಭಿನಂದನ್ ವರ್ಧಮಾನ್‌ರನ್ನು ಸೆರೆಹಿಡಿದಿದ್ದ ಪಾಕ್‌ ಅಧಿಕಾರಿ ತಾಲಿಬಾನ್‌ ಘರ್ಷಣೆಯಲ್ಲಿ ಸಾವು

ಏರ್‌ ಇಂಡಿಯಾ ವಿಮಾನ ಪತನ: ಕೊನೆಗೂ 253 ಮೃತದೇಹಗಳ ಗುರುತು ಪತ್ತೆ

ಬಾಹ್ಯಾಕಾಶಕ್ಕೆ ತೆರಳುವ ಮುನ್ನ ಪತ್ನಿ ಜೊತೆ ಗಾಜಿನ ಪರದೆ ಹಿಂದೆ ಶುಭಾಂಶು ಶುಕ್ಲ ಮೌನ ಸಂಭಾಷಣೆ

ಮುಂದಿನ ಸುದ್ದಿ
Show comments