Publish Date: Mon, 17 Jul 2023 (14:00 IST)
Updated Date: Mon, 17 Jul 2023 (15:52 IST)
ಇಂದು ವಿಪಕ್ಷಗಳ ಸಭೆ ನಡೆಯಲ್ಲಿದ್ದು,ರಾಷ್ಟ್ರ, ರಾಜ್ಯ ಮಟ್ಟದ ನಾಯಕರು ಬೆಂಗಳೂರಿಗೆ ಆಗಮನ ಹಿನ್ನಲೆ ಹಲವು ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.ತಾಜ್ ವೆಸ್ಟೆಂಡ್ ಹೊಟೇಲ್ನಲ್ಲಿ ಲೋಕಸಭಾ ವಿರೋಧ ಪಕ್ಷಗಳ ಸಭೆ ನಡೆಯಲಿದ್ದು,ನಗರದ ಕಬ್ಬನ್ ರಸ್ತೆ, ಪ್ಯಾಲೆಸ್ ರಸ್ತೆ, ಬಿಆರ್ ಅಂಬೇಡ್ಕರ್ ರಸ್ತೆ, ರೇಸ್ ಕೋರ್ಸ್ ರಸ್ತೆ, ಶೇಷಾದ್ರಿ ರಸ್ತೆಗಳಲ್ಲಿ ಸಾರ್ವಜನಿಕ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ.ಅಂಬೇಡ್ಕರ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ ಹಾಗೂ ರೇಸ್ ಕೋರ್ಸ್ ರಸ್ತೆಗಳಲ್ಲಿಯೂ ಪಾರ್ಕಿಂಗ್ ನಿಷೇಧ ಮಾಡಲಾಗಿದೆ.ವಾಹನ ಸವಾರರು ಬದಲೀ ಮಾರ್ಗಗಳಲ್ಲಿ ಚಲಿಸುವಂತೆ ನಗರ ಸಂಚಾರಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.