ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್‌ನಲ್ಲಿ ಪ್ರತಿಪಕ್ಷಗಳ ತೀವ್ರ ಗದ್ದಲಕ್ಕೆ ಬೇಸರ ವ್ಯಕ್ತ ಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿಪಕ್ಷಗಳು ರಾಜಕಾರಣ ಹಾಗೂ ಪ್ರಚಾರಕ್ಕೆ ಮಾತ್ರ ಸೀಮಿತವಾಗಿವೆ. ಅವರಿಗೆ ಬೇರೆ ವಿಚಾರಗಳಲ್ಲಿ ಆಸಕ್ತಿಯಿಲ್ಲ ಎಂದು ಕಿಡಿಕಾರಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಸೌಧಕ್ಕೆ ತನ್ನದೆ ಆದ ಗೌರವ ಇದೆ. ಎಲ್ಲರು ಸದನಕ್ಕೆ ಗೌರವ ನೀಡಬೇಕಾಗಿದೆ. ಪ್ರತಿಪಕ್ಷಗಳ ಪ್ರತಿಭಟನೆಯಿಂದ ಪ್ರಯೋಜನವಿಲ್ಲ. ಪ್ರತಿಪಕ್ಷಗಳು ರಾಜಕಾರಣ ಹಾಗೂ ಪ್ರಚಾರಕ್ಕೆ ಮಾತ್ರ ಸೀಮಿತವಾಗಿವೆ ಎಂದು ಹೇಳಿದರು.
ಸದನದಲ್ಲಿ ಪ್ರತಿಪಕ್ಷಗಳ ತೀವ್ರ ಗದ್ದಲದ ಮಧ್ಯಯೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧನವಿನಿಯೋಗ ವಿಧೇಯಕವನ್ನು ಮಂಡನೆ ಮಾಡಿದರು.
ಪ್ರತಿಪಕ್ಷಗಳು ಸದನಕ್ಕೆ ಸಹಕಾರ ನೀಡದಿದ್ದರೆ ವಿಧಾನಸಭೆ ಅಧಿವೇಶನ ಮೊಟಕುಗೊಳಿಸುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.