Select Your Language

Notifications

webdunia
webdunia
webdunia
webdunia

ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧ; ನಾಳೆ ರಾಷ್ಟ್ರೀಯ ಹೆದ್ದಾರಿ ಬಂದ್

ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧ; ನಾಳೆ ರಾಷ್ಟ್ರೀಯ ಹೆದ್ದಾರಿ ಬಂದ್
ಬೆಂಗಳೂರು , ಭಾನುವಾರ, 9 ಜೂನ್ 2019 (11:05 IST)
ಬೆಂಗಳೂರು : ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಈ ಹಿನ್ನಲೆಯಲ್ಲಿ ರೈತರು  ನಾನಾ ಬೇಡಿಕೆಗಳನ್ನು ಮುಂದಿಟ್ಟು ನಾಳೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಿದ್ದಾರೆ ಎನ್ನಲಾಗಿದೆ. ಸೋಮವಾರ ಬೆಳಗ್ಗೆ 9 ಗಂಟೆಯಿಂದ ಪ್ರತಿಭಟನೆ ಶುರು ಆಗಲಿದ್ದು, ಇಡೀ ದಿನ ಮಾಡುತ್ತೇವೆ ಎಂದು ರೈತರು ತಿಳಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ರೈತ ಸಂಘದ ರಾಜ್ಯಾಧ್ಯಕ್ಷ  ಕೋಡಿಹಳ್ಳಿ ಚಂದ್ರ ಶೇಖರ್ , ಸಿಎಂ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ಮಾಡುವ ಮೂಲಕ ರೈತರ ವಿರೋಧಿಯಾಗಿದೆ. ಈ ಕಾಯ್ದೆ ತಿದ್ದುಪಡಿ ರೈತರಿಗೆ ವಿಧಿಸಿದ ಮರಣ ಶಾಸನವಾಗಿದೆ. ಇದನ್ನು ಹಿಂಪಡೆಯುವಂತೆ ಸರ್ಕಾರಕ್ಕೆ ಆಗ್ರಹಿಸುತ್ತಿದ್ದೇವೆ. ಹಾಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್​ ಮಾಡುವ ಮೂಲಕ ಸರ್ಕಾರ ಗಮನ ಸೆಳೆಯುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಅತೀ ಹೆಚ್ಚು ರೇಡಿಯೇಷನ್ ಬಿಡುಗಡೆ ಮಾಡುವ ಸ್ಮಾರ್ಟ್​ಫೋನ್​ ಗಳು ಯಾವುವು ಗೊತ್ತಾ?