ರಾಜಕೀಯ ದುರುದ್ದೇಶದ ಜಾತಿ ಗಣತಿ ವರದಿ ಬಿಡುಗಡೆಗೆ ವಿರೋಧ

Webdunia
ಮಂಗಳವಾರ, 7 ಸೆಪ್ಟಂಬರ್ 2021 (11:34 IST)
ಬೆಂಗಳೂರು : ಜಾತಿ ಗಣತಿ ವರದಿ ಬಿಡುಗಡೆಗೆ ಅಖಿಲ ಭಾರತ ವೀರಶೈವ ಮಹಾಸಭಾ ವಿರೋಧ ವ್ಯಕ್ತಪಡಿಸಿದೆ. ಹಿಂದುಳಿದ ವರ್ಗಗಳ ಆಯೋಗ ಕಾಂತರಾಜು ನೇತೃತ್ವದಲ್ಲಿ ನಡೆಸಿದ ಜಾತಿ ಗಣತಿ ವರದಿ ಬಿಡುಗಡೆ ಮಾಡಬಾರದು, ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿ ಸಮೀಕ್ಷೆ ಹೆಸರಿನಲ್ಲಿ ನಡೆಸಲಾದ ಜಾತಿಗಣತಿ ವೈಜ್ಞಾನಿಕವಾಗಿಲ್ಲ, ಪಾರದರ್ಶಕವಾಗಿಲ್ಲ, ಸಮಗ್ರವಾಗಿಲ್ಲ ಎಂದು ದೂರಲಾಗಿದೆ.

ವೀರಶೈವ ಲಿಂಗಾಯಿತರಿಂದ ಉಪಜಾತಿಗಳನ್ನು ಉದ್ದೇಶಪೂರ್ವಕವಾಗಿ ಬೇರ್ಪಡಿಸಲಾಗಿದ್ದು, ಈ ವರದಿಯಿಂದ ವೀರಶೈವ ಲಿಂಗಾಯತರಲ್ಲಿ ಗಣನೀಯ ಸಂಖ್ಯೆಯಲ್ಲಿರುವ ಹಿಂದುಳಿದವರಿಗೆ ಅನ್ವಯವಾಗಲಿದೆ ಎಂದು ಹೇಳಲಾಗಿದೆ.
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರ ಸಂಖ್ಯೆ ನಮ್ಮಲ್ಲಿ ಹೆಚ್ಚಾಗಿದೆ. ಜಾತಿಗಣತಿ ಬಿಡುಗಡೆಯಿಂದ ಲಕ್ಷಾಂತರ ನಿರುದ್ಯೋಗಿ ಯುವಕರಿಗೆ, ಅವಕಾಶ ವಂಚಿತರಿಗೆ ಅನ್ಯಾಯವಾಗಲಿದೆ ಎಂದು ದೂರಲಾಗಿದೆ.
ಸಮೀಕ್ಷೆಯ ಅಂಶಗಳು ಸೋರಿಕೆಯಾಗಿವೆ. ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಬದಲು ಕೇವಲ ಜಾತಿವಾರು ಸಂಖ್ಯೆಯನ್ನು ವ್ಯವಸ್ಥಿತವಾಗಿ ಸೃಷ್ಟಿಸಲಾಗಿದೆ. ಇದರ ಹಿಂದೆ ರಾಜಕೀಯ ದುರುದ್ದೇಶವಿದ್ದು, ಜಾತಿ ಆಧಾರದ ಮೇಲೆ ಸಮಾಜ ಒಡೆಯುವ ಹುನ್ನಾರವಿದೆ ಎಂದು ಆರೋಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯ ನಡುವೆ ಯುವತಿಗೆ ಪಿರಿಯಡ್ಸ್: ಜೊತೆಗಿದ್ದ ಯುವಕ ಮಾಡಿದ್ದೇನು Video

ದೆಹಲಿ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಿದ ಪ್ರತಿಭಟನಾಕಾರರಿಗೆ ಮುಂದೆ ಕಾದಿದೆ ಗಂಡಾಂತರ: ಪೊಲೀಸರು ಮಾಡ್ತಿರೋದು ಏನು

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ಮುಂದಿನ ಸುದ್ದಿ
Show comments