Select Your Language

Notifications

webdunia
webdunia
webdunia
webdunia

ವಿಪಕ್ಷಗಳು ಅನಗತ್ಯವಾಗಿ ಟಾರ್ಗೆಟ್ ಮಾಡ್ತಿವೆ: ಕೆ.ಜೆ.ಜಾರ್ಜ್

ವಿಪಕ್ಷಗಳು ಅನಗತ್ಯವಾಗಿ ಟಾರ್ಗೆಟ್ ಮಾಡ್ತಿವೆ: ಕೆ.ಜೆ.ಜಾರ್ಜ್
ಬೆಂಗಳೂರು , ಮಂಗಳವಾರ, 12 ಜುಲೈ 2016 (19:41 IST)
ನಾನು ಅಧಿಕಾರಕ್ಕಾಗಿ ರಾಜಕೀಯಕ್ಕೆ ಬಂದಿಲ್ಲ ಎಂದು ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟಪಡಿಸಿದ್ದಾರೆ.
 
ವಿಧಾನಸಭೆಯಲ್ಲಿ ಮಾತನಾಡಿದ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್, ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ. ರಾಜಕೀಯ ಉದ್ದೇಶದಿಂದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ನನ್ನ ವಿರುದ್ಧ ಆರೋಪ ಮಾಡುತ್ತಿವೆ ಎಂದು ಹೇಳಿದರು.
 
ನಾನು ಅಧಿಕಾರಕ್ಕಾಗಿ ರಾಜಕೀಯಕ್ಕೆ ಬಂದಿಲ್ಲ. ಕನಸಿನಲ್ಲಿಯೂ ನಾನು ಎಂಎಲ್‌ಎ ಆಗುತ್ತೇನೆ ಎಂದುಕೊಂಡಿರಲಿಲ್ಲ. ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಮಾಧ್ಯಮದ ಮುಂದೆ ಸಂದರ್ಶನ ನೀಡಿರುವುದನ್ನು ನೋಡಿದ್ದೇನೆ. ಅವರು 2008 ರಲ್ಲಿ ನಡೆದ ಚರ್ಚ್ ದಾಳಿಯನ್ನು ಉಲ್ಲೇಖಿಸಿದ್ದಾರೆ ಎಂದು ಹೇಳಿದರು.
 
2013 ಜೂನ್ 18 ರಂದು ನಾನು ಉಡುಪಿಗೆ ತೆರಳಿದ್ದೆ. 2013 ಜೂನ್ 19 ರಂದು ಮಂಗಳೂರಿಗೆ ತೆರಳಿ ಉಲ್ಲಾಳ ದರ್ಗಾಗೆ ಭೇಟಿ ನೀಡಿದ್ದೆ. ಆ ಸಮಯದಲ್ಲಿ ಡಿವೈಎಸ್‌ಪಿ ಎಂ.ಕೆ.ಗಣಪತಿ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ ಎಂದು ಹೇಳಿದರು. 
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಪ್ರಕರಣದಲ್ಲಿ ಜಗದೀಶ್ ಶೆಟ್ಟರ್ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ನನ್ನ ವಿರುದ್ಧ ಯಾವುದೇ ತನಿಖೆ ನಡೆಸದೆ ಶಿಕ್ಷೆ ಹೇಗೆ ಮಾಡುತ್ತಾರೆ ಎಂದು ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದ್ದಾರೆ.
 
ಡಿವೈಎಸ್‌ಪಿ ಎಂ.ಕೆ.ಗಣಪತಿ ಪ್ರಕರಣದಲ್ಲಿ ನಾನು ತಪ್ಪು ಮಾಡಿಲ್ಲ. ನಾನೇಕೆ ರಾಜೀನಾಮೆ ನೀಡಲಿ. ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ನಾಯಕರು ಅವರು ರಾಜೀನಾಮೆ ನೀಡು ಎಂದರೆ ರಾಜೀನಾಮೆ ನೀಡುತ್ತೇನೆ ಎಂದು ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
 

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಜಾರ್ಜ್ ರಕ್ಷಿಸಲು ಗೃಹ ಸಚಿವರಾಗಿದ್ದೀರಾ?: ಪರಮೇಶ್ವರ್‌ಗೆ ಈಶ್ವರಪ್ಪ ಟಾಂಗ್