ಕೌಶಲ್ಯ ಮತ್ತು ಉದ್ಯಮಶೀಲತೆ" ಕಾರ್ಯಪಡೆ ಸಭೆ ನಡೆಸಿದ ಡಾ.ಸಿ.ಎನ್.ಅಶ್ವತ್ಥನಾರಾಯಣ 2025ರ ಹೊತ್ತಿಗೆ ಕೌಶಲ್ಯ ಮತ್ತು ಉದ್ಯಮಶೀಲತೆ ವಲಯದಲ್ಲಿ 10 ದಶಲಕ್ಷ ಆರ್ಥಿಕ ಅವಕಾಶಗಳನ್ನು ಸೃಷ್ಟಿ ಮಡುವ ನಿಟ್ಟಿನಲ್ಲಿ ರಾಜ್ಯ ಸರಕಾರ ಅತಿದೊಡ್ಡ ಹೆಜ್ಜೆ ಇರಿಸಿದೆ ಎಂದು ಕೌಶಲ್ಯಾಭಿವೃದ್ಧಿ ಖಾತೆ ಮಂತ್ರಿಗಳೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಬೆಂಗಳೂರಿನಲ್ಲಿ ಗುರುವಾರ "ಕೌಶಲ್ಯ ಮತ್ತು ಉದ್ಯಮಶೀಲತೆ" ಕಾರ್ಯಪಡೆಯ ಸಭೆ ನಡೆಸಿದ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಈ ಯೋಜನೆಯನ್ನು ಆದ್ಯತೆಯ ಮೇರೆಗೆ ಜಾರಿ ಮಾಡುವ ನಿಟ್ಟಿನಲ್ಲಿ ಜುಲೈ 15ರೊಳಗೆ ಕಾರ್ಯಯೋಜನೆಯ ವರದಿ ಸಲ್ಲಿಸುವಂತೆ ಕಾರ್ಯಪಡೆಗೆ ಸೂಚಿಸಲಾಗಿದೆ ಎಂದರು.
ಕೋವಿಡ್ ಸಂಕಷ್ಟದಿಂದ ರಾಜ್ಯದಲ್ಲಿ ಆರ್ಥಿಕ ಅವಕಾಶಗಳು, ಉದ್ಯೋಗ ಸರಪಳಿಯ ಮೇಲೆ ಮಾರಕ ಪರಿಣಾಮ ಬೀರಿದ್ದು, ಇದಕ್ಕೆ ಬಹು…