Publish Date: Sat, 26 Oct 2024 (18:39 IST)
Updated Date: Sat, 26 Oct 2024 (18:42 IST)
ಕಾರವಾರ: ಬೇಲೇಕೇರಿ ಅದಿರು ಕಳ್ಳತನ ಮತ್ತು ಅಕ್ರಮ ರಫ್ತು ಪ್ರಕರಣದಲ್ಲಿ ದೋಷಿಯಾಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಆರು ಪ್ರಕರಣಗಳಲ್ಲೂ 7 ವರ್ಷ ಜೈಲು ಶಿಕ್ಷೆ ವಿಧಿಸಿ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ತೀರ್ಪು ಪ್ರಕಟಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್.
ಒಟ್ಟು ಆರು ಪ್ರಕರಣಗಳಲ್ಲಿ ಕಾಂಗ್ರೆಸ್ ಶಾಸಕ ದೋಷಿ ಎಂದು ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ಆದರೆ ಶಿಕ್ಷೆಯ ಪ್ರಮಾಣವನ್ನು ಇಂದಿಗೆ ಕಾಯ್ದಿರಿಸಿತ್ತು. ಈಗ ಎಲ್ಲಾ ಪ್ರಕರಣಗಳಲ್ಲೂ ದೋಷಿ ಸತೀಶ್ ಸೈಲ್ ಇತರೆ ಅಪರಾಧಿಗಳಿಗೆ ಶಿಕ್ಷೆಯನ್ನು ಕೋರ್ಟ್ ಪ್ರಕಟಿಸಿದೆ.
ಎಲ್ಲಾ ಪ್ರಕರಣಗಳಲ್ಲೂ ಸತೀಶ್ ಸೈಲ್‌ಗೆ 7 ವರ್ಷ ಶಿಕ್ಷೆ ಪ್ರಕಟಿಸಲಾಗಿದ್ದು, ದಂಡವನ್ನೂ ವಿಧಿಸಲಾಗಿದೆ.