Publish Date: Tue, 29 Mar 2022 (16:00 IST)
Updated Date: Tue, 29 Mar 2022 (16:06 IST)
ಈ ಬಾರಿಯ ಆಸ್ಕರ್ ಪ್ರಶಸ್ತಿ ಸಮಾರಂಭ ವಿಚಿತ್ರ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ನಟ ವಿಲ್ ಸ್ಮಿತ್ ಅವರು ವೇದಿಕೆ ಮೇಲೆ ಹಾಸ್ಯ ನಟ ಕ್ರಿಸ್ ರಾಕ್ ಕೆನ್ನೆಗೆ ಬಾರಿಸುವ ಮೂಲಕ ವಿವಾದ ಹುಟ್ಟು ಹಾಕಿದ್ದಾರೆ. ಇದೇ ವೇದಿಕೆ ಮೇಲೆ ವಿಲ್ ಸ್ಮಿತ್ಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ. ಈ ಪ್ರಶಸ್ತಿಯನ್ನು ಹಿಂಪಡೆಯಬೇಕು ಎನ್ನುವ ಆಗ್ರಹ ಕೇಳಿ ಬರುತ್ತಿದೆ. ಇದಕ್ಕೆ ಅಕಾಡೆಮಿ ಪ್ರತಿಕ್ರಿಯಿಸಿದೆ. ಅತ್ಯುತ್ತಮ ಡಾಕ್ಯುಮೆಂಟರಿ ಪ್ರಶಸ್ತಿಯನ್ನು ವಿತರಿಸಲು ಕ್ರಿಸ್ ರಾಕ್ ಅವರನ್ನು ವೇದಿಕೆಗೆ ಕರೆಯಲಾಗಿತ್ತು. ಈ ವೇಳೆ ವಿಲ್ ಸ್ಮಿತ್ ಪತ್ನಿ ಜೇಡಾ ಪಿಂಕೆಟ್ ಸ್ಮಿತ್ ಬಗ್ಗೆ ಮಾತನಾಡಿದರು. ಜೇಡಾ ಪಿಂಕೆಟ್ ಸ್ಮಿತ್ ಬಗ್ಗೆ ಅವರು ಜೋಕ್ ಕೂಡ ಮಾಡಿದರು. ಅದನ್ನು ಕೇಳಿ ಇಡೀ ಸಭಾಂಗಣ ಜೋರಾಗಿ ನಕ್ಕಿತು. ಒಂದು ಕ್ಷಣ ವಿಲ್ ಸ್ಮಿತ್ ಕೂಡ ನಕ್ಕರು. ಆದರೆ ಕೂಡಲೇ ವೇದಿಕೆ ಏರಿದ ವಿಲ್ ಸ್ಮಿತ್ ಅವರು ಕ್ರಿಸ್ ರಾಕ್ ಮುಖಕ್ಕೆ ಬಾರಿಸಿದರು. ಸದ್ಯ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಇದಕ್ಕೆ ಅನೇಕರು ಖಂಡನೆ ವ್ಯಕ್ತಪಡಿಸಿದ್ದರು.