ಬೆಂಗಳೂರು: ಚರ್ಚೆಗೆ ಕಾರಣವಾಗುತ್ತಿರುವ ರಾಜ್ಯ ರಾಜಕೀಯ ಬೆಳವಣಿಗೆ ಬಗ್ಗೆ ಗೃಹಮಂತ್ರಿ ಜಿ ಪರಮೇಶ್ವರ್ ಅವರು ಪ್ರತಿಕ್ರಿಯಿಸಿ, ಪಕ್ಷದ ಎಲ್ಲ ಸದಸ್ಯರು ಹೈಕಮಾಂಡ್ ಏನ್ ತೀರ್ಮಾನ ಮಾಡುತ್ತಾ ಅದಕ್ಕೆ ಗೌರವಯುತವಾಗಿ ನಡೆದುಕೊಳ್ಳುತ್ತಾರೆ ಎಂದರು.
ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಪಕ್ಷದಲ್ಲಿ ಶಿಸ್ತು ಪಾಲನೆಯನ್ನು ಮಾಡಲಾಗುತ್ತದೆ. ಇನ್ನೂ ಪಕ್ಷದಲ್ಲಿರುವ ಶಿಸ್ತನ್ನು ಯಾರು ಪಾಲಿಸುವುದಿಲ್ಲವೂ ಅವರ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಲುತ್ತದೆ. ಹಿಂದಿನಿಂದಲೂ ಇದು ನಡೆದುಕೊಂಡು ಬಂದಿದೆ ಎಂದು ಹೇಳಿದರು.
ಇನ್ನೂ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಮುಖ್ಯಮಂತ್ರಿಗಳು ಹೇಳಿರುವುದು ಸರಿಯಿದೆ. ಅವರು ಹಿಂದಿನಿಂದಲೂ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿದ್ದಾರೆ ಎಂದರು.