Select Your Language

Notifications

webdunia
webdunia
webdunia
webdunia

ದಿಢೀರನೇ ಬಂದ್ ಆದ ನಮ್ಮ ದೇವೇಗೌಡ ಅಪ್ಪಾಜಿ ಕ್ಯಾಂಟೀನ್, ಕಾರಣ ಇಲ್ಲಿದೆ

Namma Devegouda Appaji Canteen
ಬೆಂಗಳೂರು: ಹಸಿದವರಿಗೆ ಅತಿ ಕಡಿಮೆ ಬೆಲೆಯಲ್ಲಿ ಊಟ ಹಾಗೂ ತಿಂಡಿ ಒದಗಿಸುತ್ತಿದ್ದ ದೇವೇಗೌಡ ಅ‍ಪ್ಪಾಜಿ ಕ್ಯಾಂಟೀನ್ ಅನ್ನು ಇದೀಗ ಬಂದ್ ಮಾಡಲಾಗಿದೆ. 

ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆ ಇದೀಗ ನಮ್ಮ ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂದು ಹೇಳಲಾಗಿದೆ. 

ಈ ಸಂಬಂಧ ಜೆಡಿಎಸ್‌ ವಿಧಾನ ಪರಿಷತ್ ಸದಸ್ಯರಾದ ಟಿಎ ಶರವಣ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಆದರೆ ಇತ್ತೀಚೆಗೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಉಂಟಾದ ಸಮಸ್ಯೆಯಿಂದ ಕ್ಯಾಂಟೀನ್ ನಡೆಸುವುದು ಕಷ್ಟವಾಗಿದೆ ಎಂದು ಹೇಳಿಕೊಂಡಿದ್ದಾರೆ.

ಗ್ಯಾಸ್ ಸಿಲಿಂಡರ್ ಪೂರೈಕೆ ಯಥಾಸ್ಥಿತಿಗೆ ಮರಳಿದ ನಂತರ ಕ್ಯಾಂಟೀನ್ ಮರುಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಾರ್ಮುಜ್ ಜಲಸಂಧಿಯಿಂದ ಮುಂಬೈಗೆ ಮೊದಲ ತೈಲ ಹಡಗು: ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಗೆಲುವು