ನನ್ನ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಡುವಿನ ಜಗಳ ಗಂಡ-ಹೆಂಡತಿ ವಿರಸವಿದ್ದಂತೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಅವರು ಬ್ರಿಗೇಡ್‌ಗೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಇನ್ಮುಂದೆ ಬ್ರಿಗೇಡ್ ಕುರಿತು ಏನು ಮಾತನಾಡುವುದಿಲ್ಲ ಎಂದಿದ್ದಾರೆ. ಇದೀಗ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೆ ಯಾರ ವಿರೋಧವು ಇಲ್ಲ ಎಂದು ಸ್ಪಷ್ಟಪಡಿಸಿದರು.
ನನ್ನ ಹಾಗೂ ಬಿಎಸ್‌ವೈ ನಡುವಿನ ಜಗಳ ಗಂಡ-ಹೆಂಡತಿ ವಿರಸವಿದ್ದಂತೆ. ಗಂಡ-ಹೆಂಡತಿಯ ಜಗಳ ಶಾಶ್ವತವಾಗಿ ಇರುತ್ತೇನ್ರಿ?. ಸದ್ಯದಲ್ಲಿಯೇ ಎಲ್ಲ ಗೊಂದಲಗಳು ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಿಎಂ ವಿರುದ್ಧ ಕಿಡಿ......
ಅಹಿಂದದ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಲಿತರು ಹಾಗೂ ಹಿಂದುಳಿದ ಜನಾಂಗದ ಅಭಿವೃದ್ಧಿಯನ್ನು ನೀರ್ಲಕ್ಷಿಸಿದ್ದಾರೆ. ಇನ್ಮುಂದೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ದಲಿತರು ಹಾಗೂ ಹಿಂದುಳಿದ ವರ್ಗಗಳ ಧ್ವನಿಯಾಗಿ ಕೆಲಸ ಮಾಡಲಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ