ಅಲ್ಪಸಂಖ್ಯಾತರು ಪಕ್ಷದ ಕಚೇರಿಯ ಕಸಗುಡಿಸಿದಲ್ಲಿ ಟಿಕೆಟ್ ಕೊಡುತ್ತೇವೆ ಎಂದಿದ್ದರೆಲ್ಲಾ ಈಶ್ವರಪ್ಪನವರೇ ಆ ಥರ ನಾವಲ್ಲ. ನಮ್ಮದು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕ ಈಶ್ವರಪ್ಪಗೆ ಟಾಂಗ್ ನೀಡಿದ್ದಾರೆ.
ವಿಧಾನಪರಿಷತ್ ಕಲಾಪದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ, 50 ಸಾವಿರ ರೂಪಾಯಿಗಳವರೆಗಿನ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಇದರಿಂದ ರಾಜ್ಯದ 22 ಲಕ್ಷ ರೈತರಿಗೆ ಅನುಕೂಲವಾಗಲಿದೆ. ರಾಜ್ಯದ ಬೊಕ್ಕಸಕ್ಕೆ 8165 ಕೋಟಿ ರೂಪಾಯಿ ಹೊರೆಯಾಗಲಿದೆ ಎಂದು ತಿಳಿಸಿದರು.
ರಾಜ್ಯ ಸರಕಾರ ಸಹಕಾರ ಸಂಘಗಳಲ್ಲಿರುವ ರೈತರ 50 ಸಾವಿರ ರೂಪಾಯಿ ಸಾಲವನ್ನು ಮನ್ನಾ ಮಾಡಿದೆ. ಇದೀಗ ಕೇಂದ್ರ ಸರಕಾರ ಕೂಡಾ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ಸಾಲವನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ರೈತರ ಬಗ್ಗೆ ನಿಜವಾದ ಕಾಳಜಿಯಿದ್ದಲ್ಲಿ ಮೋದಿ ಸರಕಾರದ ಮೇಲೆ ಒತ್ತಡ ಹೇರಿ, ಸಾಲ ಮನ್ನಾ ಮಾಡಿಸಬೇಕು ಎಂದು ಸವಾಲ್ ಹಾಕಿದರು.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ
ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.