Publish Date: Wed, 08 Jul 2026 (20:02 IST)
Updated Date: Wed, 08 Jul 2026 (20:04 IST)
ಬೆಂಗಳೂರು: ಬೆಂಗಳೂರಿನ ಆಚೆಗೆ ಮತ್ತಷ್ಟು ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ. ಇನ್ನೂ ಬೆಂಗಳೂರಿನಲ್ಲಿರುವ ಎಲ್ಲ ಸೌಕರ್ಯಗಳನ್ನು ರಾಜ್ಯದ ಎರಡು ಹಾಗೂ ಮೂರನೇ ಹಂತದ ನಗರಗಳಿಗೂ ಉದಗಿಸಲು ಬದ್ಧರಾಗಿದ್ದೇವೆಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಬುಧವಾರ ನಡೆದ ಟಾರ್ಗೆಟ್ ಇಂಡಿಯಾ ಕಾರ್ಯಕ್ರಮದ ವೇಳೆ ಮಾತನಾಡಿದ ಸಿಎಂ, ಬೆಂಗಳೂರಿನಲ್ಲಿ ಕಚೇರಿ ಜಾಗದ ಬಾಡಿಗೆ 1 ರಿಂದ 1.5 ಡಾಲರ್ ಇದೆ.
ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿ ಅರ್ಧ ಡಾಲರ್ ಗೆ ಸಿಗುತ್ತದೆ. ಅಲ್ಲಕ ಡಬಲ್ ಎಫ್ಎಆರ್ ನೀಡಲು ಮುಂದಾಗಿದ್ದೇವೆ. ಈ ಮೂಲಕ ಅಲ್ಲಿಯೂ ಬಹುಮಹಡಿ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶ ನೀಡಲು ಮುಂದಾಗಿದ್ದೇವೆ. ಕರ್ನಾಟಕದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತಿದೆ. ನಿಮ್ಮ ಸಲಹೆಗಳಿಗೆ ನಾವು ಮುಕ್ತರಾಗಿದ್ದೇವೆ ಎಂದರು.
ನೀವೆಲ್ಲರೂ ಬಲಿಷ್ಠವಾಗಿ ಬೆಳೆಯಲು ಎಲ್ಲಾ ಸಹಕಾರ ನೀಡಲು ಸಿದ್ಧರಾಗಿದ್ದು, ನೀವು ಬಲಿಷ್ಠವಾದರೆ , ನೀವೆಲ್ಲರೂ ಕರ್ನಾಟಕದ ಪ್ರಗತಿಯ ಪಾಲುದಾರರು, ರಾಯಭಾರಿಗಳು. ಈ ರಾಜ್ಯ ಹಾಗೂ ದೇಶದ ಪ್ರಗತಿಗೆ ನಾವು ನಿಮ್ಮ ಜೊತೆ ಕೆಲಸ ಮಾಡಲಿದ್ದೇವೆ. ನಾವೆಲ್ಲರೂ ಒಂದೇ ತಂಡ 'ಟೀಮ್ ಕರ್ನಾಟಕ'. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಜತೆಗೂಡುವುದು ಆರಂಭ, ಜತೆಗೂಡಿ ಆಲೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂದು ತಿಳಿಸಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ