Publish Date: Mon, 10 Apr 2023 (17:04 IST)
Updated Date: Mon, 10 Apr 2023 (16:57 IST)
ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ ವಿಚಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಜೆಪಿ ನಗರದ ನಿವಾಸದಲ್ಲಿ ಮಾತನಾಡಿದ ಅವರು, ನಮ್ಮ ಪಟ್ಟಿ ಕಂಪ್ಲೀಟ್ ಆಗಿ ಸಿದ್ದವಾಗಿದೆ. ಅದರೆ ಪಂಚರತ್ನ ಯಾತ್ರೆಯಿಂದ ಬ್ಯುಸಿಯಾಗಿದ್ದೇನೆ, ವಿವಿಧ ಜಿಲ್ಲೆಗಳಲ್ಲಿ ಸಂಚಾರ ಮಾಡುತ್ತಿದ್ದೇನೆ. ಹೀಗಾಗಿ ಸ್ವಲ್ಪ ತಡವಾಗಿದೆ. ಮೂರನೇ ಪಟ್ಟಿ ಬಿಡುಗಡೆ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಜೊತೆ ಚರ್ಚೆಯನ್ನು ಮಾಡಿದ್ದೇನೆ. ಪಟ್ಟಿ ಬಿಡುಗಡೆ ಮಾಡಬೇಕಿದೆ ಅಷ್ಟೇ, ಯಾವುದೇ ಅಡೆ ತಡೆಗಳಿಲ್ಲದೆ ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ರು.