ನಮ್ಮ ನಡೆ ಮತಗಟ್ಟೆಯ ಕಡೆ' ಜಾಗೃತಿ ಜಾಥ ಕಾರ್ಯಕ್ರಮ

Webdunia
ಭಾನುವಾರ, 30 ಏಪ್ರಿಲ್ 2023 (16:00 IST)
ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಸಂಬಂಧ ಮತದಾರರಲ್ಲಿ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ನಗರದಾದ್ಯಂತ ಹಮ್ಮಿಕೊಂಡಿರುವ ನಮ್ಮ ನಡೆ ಮತಗಟ್ಟೆಯ ಕಡೆ ಜಾಗೃತಿ ಜಾಥ ಕಾರ್ಯಕ್ರಮಕ್ಕೆ ಮುಖ್ಯ ಚುನಾವಣಾಧಿಕಾರಿಯಾದ  ಮನೋಜ್ ಕುಮಾರ್ ಮೀನಾ ಹಾಗೂ ಜಿಲ್ಲಾ ಚುನಾವಣಾಧಿಕಾರಿ  ಮತ್ತು ಬಿಬಿಎಂಪಿಯ ಮುಖ್ಯ ಆಯುಕ್ತರಾದ  ತುಷಾರ್ ಗಿರಿ ನಾಥ್ ರವರು ಜಕ್ಕೂರು ಬಡಾವಣೆಯ ನ್ಯೂ ಕೃಷ್ಣ ಸಾಗರ ಫುಡ್ ಕೋರ್ಟ್ ವೃತ್ತದಲ್ಲಿ ಚಾಲನೆ ನೀಡಿದರು.
 
ಜಕ್ಕೂರು ಬಡಾವಣೆಯ ನ್ಯೂ ಕೃಷ್ಣ ಸಾಗರ ಫುಡ್ ಕೋರ್ಟ್ ನಿಂದ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ, ಶ್ರೀ ರಾಮ ವಿದ್ಯಾಲಯ, ಜಕ್ಕೂರು ವೃತ್ತದ ಮೂಲಕ ಸಾಗಿ ಜಕ್ಕೂರಿನ ಸರ್ಕಾರಿ ಮಾದರಿ ಪ್ರಾಥಮಿಕ ಪಾಠಶಾಲೆಯ ಮತಗಟ್ಟೆಯವರೆಗು ಸಾಗಿ ಮತಗಟ್ಟೆಯ ಆವರಣದಲ್ಲಿ ಪ್ರಜಾಪ್ರಭುತ್ವದ ಹಬ್ಬ - ಮೇ 10 ಮತದಾನ ಎಂಬ ದ್ಯೇಯ ಒಳಗೊಂಡಿರುವ ಬಾವುಟವನ್ನು ದ್ವಜಾರೋಹಣ ಮಾಡಲಾಯಿತು.
 
ಪಾಲಿಕೆಯ ಎಲ್ಲಾ ಅಧಿಕಾರಿ/ಸಿಬ್ಬಂದಿ ವರ್ಗ, ನಾಗರಿಕರು, ಸೈಕಲ್, ದ್ವಿಚಕ್ರ, ಆಟೋ ಟಿಪ್ಪರ್, ಕಾಲ್ನಡಿಗೆ ಮೂಲಕ ನಡೆದ ಜಾಥ ಕಾರ್ಯಕ್ರಮದಲ್ಲಿ ಎಲ್.ಇ.ಡಿ ಪರೆದೆಯುಳ್ಳ ವಾಹನದಲ್ಲಿ  ಚುನಾವಣಾ ಗೀತೆಯನ್ನು ಬಳಸಿಕೊಂಡು, ರಸ್ತೆಯುದ್ದಕ್ಕೂ ಬಿತ್ತಿಪತ್ರಗಳನ್ನು ಪ್ರದರ್ಶಿಸುತ್ತಾ, ಘೋಷಣೆಗಳನ್ನು ಕೂಗುತ್ತಾ ಮತದಾರರಲ್ಲಿ ಮೇ. 10 ರಂದು ತಪ್ಪದೆ ಮತದಾನ ಮಾಡಲು ಮನವರಿಕೆ ಮಾಡಲಾಯಿತು.
 
ಜಕ್ಕೂರಿನ ಸರ್ಕಾರಿ ಮಾದರಿ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ 7 ಮತಗಟ್ಟೆಗಳು ಬರಲಿದ್ದು, ಕನಿಷ್ಟ ಸೌಲಭ್ಯಗಳಿರುವುದನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಪರಿಶೀಲಿಸಿ, ಮತದಾನದ ದಿನ ಯಾವುದೇ ರೀತಿಯ ಸಮಸ್ಯೆಯಾಗದಂತೆ ಎಲ್ಲಾ ರೀತಿಯ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
 
ನಗರದಾದ್ಯಂತ ವಾರ್ಡ್ ವಾರು ಅಪರ ಜಿಲ್ಲಾ ಚುನಾವಣಾಧಿಕಾರಿ, ಚು‌ನಾವಣಾಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಜಾಥ ನಡೆಸಿ, ಸ್ಥಳೀಯ ಮತಗಟ್ಟೆ ವ್ಯಾಪ್ತಿಯ ಮತದಾರರೊಂದಿಗೆ ಮತದಾನ ಮಾಡುವ ಮತಗಟ್ಟೆಗೆ ಭೇಟಿ ನೀಡಿ ಮತದಾರರಿಗೆ ಕನಿಷ್ಟ ಮೂಲಭೂತ ಸೌಕರ್ಯಗಳ ವ್ಯವಸ್ಥೆಯ ಬಗ್ಗೆ ಅರಿವು ಮೂಡಿಸಲಾಯಿತು‌.
 
ಈ ವೇಳೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಶ್ರೀ ಸಂಗಪ್ಪ, ವಲಯ ಜಂಟಿ ಆಯುಕ್ತರಾದ ಪೂರ್ಣಿಮಾ, ಉಪ ಆಯುಕ್ತರಾದ ಮಮತಾ, ಚುನಾವಣಾ ರಾಯಭಾರಿಯಾದ ಮೋಹನ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಜೆಟ್ ಬಳಿಕ ಸಿಎಂ ಆಗ್ತೀರಾ ಎಂಬ ಪ್ರಶ್ನೆಗೆ ಡಿಕೆ ಶಿವಕುಮಾರ್ ಶಾಕಿಂಗ್ ಉತ್ತರ

ಮೆಟ್ರೋ ದರ ಏರಿಕೆ ಮಾಡಿದ್ದಕ್ಕೆ ಕೇಂದ್ರಕ್ಕೆ ಒಂದು ಪತ್ರ ಬರೀಲಿ, ಉಳಿದಿದ್ದನ್ನು ನಾನು ನೋಡಿಕೊಳ್ತೇನೆ: ತೇಜಸ್ವಿ ಸೂರ್ಯ ಸವಾಲ್

Karnataka weather: ವಾರಂತ್ಯಕ್ಕೆ ರಾಜ್ಯದ ಹವಾಮಾನ ಹೇಗಿರಲಿದೆ

ಎರಡು ಡೇಟ್ ಮಿಸ್ ಆಗಿದೆ, ಈ ಬಾರಿ ಆಗಲ್ಲ: ಡಿಕೆಶಿ ಜೊತೆಗಿದ್ದಾರೆ ಇಷ್ಟು ಶಾಸಕರು... ಇಕ್ಬಾಲ್ ಶಾಕಿಂಗ್ ಹೇಳಿಕೆ

ಯತೀಂದ್ರನೇ ನಮ್ಮ ಹೈಕಮಾಂಡ್, ಅವರು ಹೇಳಿದ್ದನ್ನು ಕೇಳೋಣ: ಡಿಕೆ ಶಿವಕುಮಾರ್ ಟಾಂಗ್

ಮುಂದಿನ ಸುದ್ದಿ
Show comments