Webdunia - Bharat's app for daily news and videos

Install App

ನಮ್ಮದು ಆಪರೇಷನ್ ಅಲ್ಲ ಕೋ ಅಪರೇಷನ್ ಸ್ನೇಹದ ಹಸ್ತ : ಶಿವಕುಮಾರ್

Webdunia
ಶನಿವಾರ, 9 ಸೆಪ್ಟಂಬರ್ 2023 (11:53 IST)
ಬೆಂಗಳೂರು : ಆಪರೇಷನ್ ಹಸ್ತ, ಆಪರೇಷನ್ ಕಮಲ ಎರಡರ ವಿರೋಧಿ. ಯಾವುದೇ ಕಾರಣಕ್ಕೂ ಈ ಕೆಲಸಕ್ಕೆ ಮುಂದಾಗುವುದಿಲ್ಲ. ನಮ್ಮದೇನಿದ್ದರೂ ಕೋ-ಆಪರೇಷನ್ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
 
ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು ಸುಕುಮಾರ್ ಶೆಟ್ಟಿ ಆಗಲಿ ಯಾರೇ ಆಗಲಿ ನಾವು ಸ್ನೇಹದ ಹಸ್ತ ಚಾಚುತ್ತೇವೆ. ನಮ್ಮ ಪಕ್ಷದ ತತ್ವ ಸಿದ್ದಾಂತ, ಭಾರತ್ ಜೋಡೋ ಬಗ್ಗೆ ಯಾರಿಗೆ ಒಲವಿದೆ ಅವರನ್ನು ತಬ್ಬಿಕೊಳ್ಳುತ್ತೇವೆ. ಅವರ ಹೆಗಲ ಮೇಲೆ ಕೈಹಾಕಿಕೊಂಡು ಹೆಜ್ಜೆ ಹಾಕುತ್ತೇವೆ. ಹಾಲಿ- ಮಾಜಿಗಳನ್ನ ಯಾರಾದರೂ ತಬ್ಬಿಕೊಳ್ಳುತ್ತೇವೆ ಎಷ್ಟು ಜನ ಸೇರಲಿದ್ದಾರೆ ಎನ್ನುವ ಪಟ್ಟಿ ಹೇಳಲು ಆಗಲ್ಲ. ಅವರವರೇ ಹೇಳಿರುವಂತೆ ಒಳ್ಳೆಯ ಮುಹೂರ್ತ, ಲಗ್ನ ಕೂಡಿ ಬಂದಾಗ ನಡೆಯಲಿದೆ. 

ರಾಜಕೀಯದಲ್ಲಿ ಯಾರೂ ಮಿತ್ರರಲ್ಲ, ಶತ್ರುಗಳಲ್ಲ. ರಾಜಕೀಯ ಎನ್ನುವುದು ಸಾಧ್ಯತೆಗಳ ಕಲೆ. ನಾವು ಯಾರನ್ನು ಕರೆಯುವುದಿಲ್ಲ. ರಾಜಕೀಯದಲ್ಲಿ ಯಾರೂ ದಡ್ಡರಲ್ಲ. ಎಲ್ಲರೂ ಅವರವರ ಭವಿಷ್ಯ ನೋಡಿಕೊಳ್ಳಬೇಕು. ಮಹಾರಾಷ್ಟ್ರದಲ್ಲಿ ಎಲ್ಲಾ ವಾಷಿಂಗ್ ಮೆಷಿನ್ ಸೇರಿಕೊಂಡು ಬಿಡಲಿಲ್ಲವೇ ಎಂದಿದ್ದಾರೆ.

ಇನ್ನು ಕಾವೇರಿ ನೀರನ್ನು ನಿಲ್ಲಿಸುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ನಮಗೆ ಸಾಕಷ್ಟು ಒಳಹರಿವು ಬರುತ್ತಿಲ್ಲ. ಸುಪ್ರೀಂ ಕೋರ್ಟ್ ಹೇಳಿದ ಪ್ರಮಾಣದಷ್ಟು ನೀರನ್ನು ಬಿಡಲು ಆಗುತ್ತಿಲ್ಲ. ಮಳೆಯ ನಿರೀಕ್ಷೆಯಲ್ಲಿದ್ದೇವೆ. ಜೊತೆಗೆ ನಮ್ಮ ರೈತರ ಹಿತ ಕಾಯುವುದು ಮುಖ್ಯ ಅದಕ್ಕೆ ನಾವು ಬದ್ಧ.

ನೀರು ಬಿಡುಗಡೆ ಮಾಡಬಾರದು ಎಂದು ಪ್ರತಿಭಟನೆಗಳು ನಡೆಯುತ್ತಿವೆ, ಬೆಂಗಳೂರು, ರಾಮನಗರ ಭಾಗಗಳಲ್ಲಿ ಮಳೆ ಬೀಳುತ್ತಿರುವ ಕಾರಣ ಸ್ವಲ್ಪ ಮಟ್ಟಿಗೆ ಪರಿಸ್ಥಿತಿ ನಿಭಾಯಿಸಲಾಗುತ್ತಿದೆ. ರೈತರ ಬೆಳೆ ಹಾಗೂ ಕುಡಿಯುವ ನೀರು ನಮ್ಮ ಆದ್ಯತೆ. ನಿಗದಿ ಮಾಡಿದಷ್ಟು ನೀರು ಬಿಡುಗಡೆ ಮಾಡಲು ಬಿಡುಗಡೆ ಮಾಡಲು ನೀರೇ ಇಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

JEE Main Result 2025: JEE Main ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ನೋಡಿ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments